ಹೆಜಮಾಡಿ : ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ
ಇಂದು ಸರಕಾರದ ಉಚಿತ ಕೊಡುಗೆಯಲ್ಲಿ ಒಂದಾದ ಶೂ / ಸಾಕ್ಸ್ ವಿತರಣಾ ಕಾರ್ಯಕ್ರಮ ನಡೆಯಿತು.
ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸತೀಶ್ ನಾಯಕ್ ಹಾಗೂ ಸದಸ್ಯರುಗಳು, ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಪಾಂಡುರಂಗ ಕರ್ಕೇರ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ದಾನಿಗಳಾದ ಮುಂಬೈ ಹಳೆ ವಿದ್ಯಾರ್ಥಿ ಟ್ರಸ್ಟ್ ನ ಸದಸ್ಯರಾದ ಶೇಷಗಿರಿರಾವ್, ಅನಿಲ್ ಕುಂದರ್, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.