ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕುತ್ಯಾರು : ಸೂರ್ಯ ಚೈತನ್ಯ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾಗಿ ದಿವಾಕರ ಆಚಾರ್ಯ ಗೇರುಕಟ್ಟೆ ನೇಮಕ

Posted On: 30-08-2023 04:25PM

ಕುತ್ಯಾರು : ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಪಡುಕುತ್ಯಾರು ಉಡುಪಿ ಇವರ ಮಾರ್ಗದರ್ಶನದಲ್ಲಿ ಎಸೆಟ್ ಆಧೀನದಲ್ಲಿರುವ ಕಾಪು ತಾಲೂಕಿನ ಕುತ್ಯಾರು ಶ್ರೀ ಸೂರ್ಯ ಚೈತನ್ಯ ಆಂಗ್ಲ ಮಾಧ್ಯಮ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ದಿವಾಕರ ಆಚಾರ್ಯ ಗೇರುಕಟ್ಟೆ ಇವರನ್ನು ನೇಮಿಸಲಾಗಿದೆ.

ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸುಮಾರು 40 ವರ್ಷಗಳ ಶೈಕ್ಷಣಿಕ ಸೇವಾ ಅನುಭವವನ್ನು ಹೊಂದಿರುತ್ತಾರೆ.

ಪ್ರಸ್ತುತ ಈ ಸಂಸ್ಥೆಯಲ್ಲಿ ಯಲ್. ಕೆ .ಜಿ ಯಿಂದ 10ನೇ ತರಗತಿವರೆಗೆ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಸಂಸ್ಕೃತ ,ಯೋಗ, ಕರಾಟೆ, ಯಕ್ಷಗಾನ ,ಭಜನೆ ಕುಣಿತ ಮೊದಲಾದ ವಿಷಯಗಳಲ್ಲಿ ತರಬೇತಿಯನ್ನು ಸಂಸ್ಥೆಯಲ್ಲಿ ನೀಡಲಾಗುತ್ತಿದ್ದು ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯಲ್ಲಿ ಐದನೇ ಸ್ಥಾನವನ್ನು ಪಡೆದಿರುತ್ತದೆ.