ಹೆಜಮಾಡಿ : ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ
Posted On:
01-09-2023 07:05AM
ಹೆಜಮಾಡಿ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ ಆಶ್ರಯದಲ್ಲಿ ರಾಜೀವ ಗಾಂಧಿ ಕ್ರೀಡಾಂಗಣ ಹೆಜಮಾಡಿ ಇಲ್ಲಿ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ ಜರಗಿತು.
ಹೆಜಮಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ರೇಷ್ಮಾ ಮೆಂಡನ್ ರವರ ಅಧ್ಯಕ್ಷತೆಯಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಪಾಂಡುರಂಗ ಕರ್ಕೇರಾ ಉದ್ಘಾಟಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಶಿವರಾಮ ಶೆಟ್ಟಿ, ಶೇಕ್ ಸಿರಾಜ್ ಹೆಜಮಾಡಿ, ಜಿಲ್ಲಾ ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಸತೀಶ್ ನಾಯಕ್, ರಿತೇಶ್ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಈಶ್ವರ್ ಉಪಸ್ಥಿತರಿದ್ದರು.
ಸಂಸ್ಥೆಯ ಹಿರಿಯ ಶಿಕ್ಷಕಿ ಸಂಪಾವತಿ ಸ್ವಾಗತಿಸಿದರು. ಸಹ ಶಿಕ್ಷಕಿ ದೀಪ ಉಡುಪ ಹಾಗೂ ಅನಿತಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕ ಮಂಜುನಾಥ ಪಿ ವಂದಿಸಿದರು.