ಉಡುಪಿ : ಕೇಂದ್ರ ರಾಜ್ಯದಲ್ಲಿ ನಿಸ್ವಾರ್ಥ ರಾಜಕಾರಣ ಮಾಡಿರುವ ಕೇಂದ್ರದ ಮಾಜಿ ಸಚಿವ ದಿವಂಗತ ಆಸ್ಕರ್ ಫೆರ್ನಾಂಡಿಸ್ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣಕರ್ತರು. ಯಾವುದೇ ಪ್ರಚಾರ ಬಯಸದ ಆಸ್ಕರ್ ಫೆರ್ನಾOಡಿಸ್ ನಿಜವಾಗಿಯೂ ಸಮಾಜಸೇವೆಗೆ ಮತ್ತೊಂದು ಹೆಸರು ಎಂದು ಕೆಪಿಸಿಸಿ ಕಾರ್ಯದರ್ಶಿ ಎಂಎ ಗಪೂರ್ ತಿಳಿಸಿದರು.
ಅವರು ದಿವಂಗತ ಆಸ್ಕರ್ ಫೆರ್ನಾOಡಿಸ್ ಅಭಿಮಾನಿ ಬಳಗ ಮತ್ತು ಮಾನವ ಬಂಧುತ್ವ ವೇದಿಕೆ ಉಡುಪಿ ಜಿಲ್ಲಾ ಸಂಚಲನ ಸಮಿತಿ ನೇತೃತ್ವದಲ್ಲಿ ದಿವಂಗತ ಆಸ್ಕರ್ ಫೆರ್ನಾOಡಿಸ್ ರವರ ದ್ವಿತೀಯ ಪುಣ್ಯತಿಥಿಯ ಸ್ಮರಣಾರ್ಥ ಉದ್ಯಾವರ ಸಂಪಿಗೆ ನಗರದ 'ಸ್ನೇಹಲಯ'ದಲ್ಲಿ ದಿನಸಿ ವಸ್ತುಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಅಸ್ಕರ್ ಫೆರ್ನಾOಡಿಸ್ ರವರು ಕೇಂದ್ರ ಸಚಿವರಾಗಿದ್ದಾಗ ಮಧ್ಯರಾತ್ರಿಯವರೆಗೂ ತನ್ನ ಕಚೇರಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿದ್ದರು. ಅವರ ಕೆಲಸ ಕಾರ್ಯಗಳೇ ನನ್ನ ಸಾಮಾಜಿಕ ಕೆಲಸಗಳಿಗೆ ಪ್ರೇರಣೆ ಎಂದರು.
ಈ ಸಂದರ್ಭದಲ್ಲಿ ದಿನಸಿ ವಸ್ತುಗಳ ಪ್ರಾಯೋಜಕರೂ, ಮಾನವ ಬಂಧುತ್ವ ವೇದಿಕೆ ಇದರ ರಾಜ್ಯ ಸಮಿತಿ ಸದಸ್ಯರಾಗಿರುವ ರೊನಾಲ್ಡ್ ಮನೋಹರ್ ಕರ್ಕಡ, ಕಡೆಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಮಂಜೀತ್ ನಾಗರಾಜ್, ಮಹಮ್ಮದ್ ಶೀಶ್, ಜೂಲಿಯನ್ ದಾಂತಿ, ಚಾಲ್ಸ್ ಅಂಬ್ಲರ್, ರಿಯಾಜ್ ಪಳ್ಳಿ, ಸುಹೇಲ್ ಅಬ್ಬಾಸ್, ಪ್ರೇಮ್ ಮಿನೆಜಸ್, ಸಿಸ್ಟರ್ ಲೀನಾ ಮತ್ತಿತರರು ಉಪಸ್ಥಿತರಿದ್ದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.