ಕಾಪು : ಮೊದಲ ಪೂಜಿತ ದೇವ ಗಣಪತಿಯ ಆರಾಧನಾ ಮಹೋತ್ಸವ ಗಣೇಶ ಚತುರ್ಥಿಯ ಸಂಭ್ರಮವನ್ನು ಕಾಪು ತಾಲೂಕಿನಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಮೂಲಕ 14 ಕಡೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಕಾಪು ತಾಲೂಕಿನ ದೇವಳಗಳಲ್ಲಿ ವಿಶೇಷ ಪೂಜೆಯೊಂದಿಗೆ, ಉಚ್ಚಿಲದಲ್ಲಿ 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ, ಕಾಪುವಿನಲ್ಲಿ 44ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ, ಪಾದೂರಿನಲ್ಲಿ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ, 20 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪಣಿಯೂರು, 36 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಎರ್ಮಾಳು ಸೇರಿದಂತೆ ಪಡುಬಿದ್ರಿ ಇನ್ನಿತರ ಭಾಗಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಗಣೇಶೋತ್ಸವವು ಆಚರಿಸಲಾಗುತ್ತಿದೆ.