ಉಡುಪಿ : ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮವನ್ನು ಇಂದು ಮಣಿಪಾಲ ಜಿಲ್ಲಾಧಿಕಾರಿಗಳ ಅಟಲ್ ಬಿಹಾರಿ ವಾಜಪೇಯಿ ಆಡಿಟೋರಿಯಂನಲ್ಲಿ ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕಾಪು ಶಾಸರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ, ಸಹಾಯಕ ಆಯುಕ್ತರಾದ ರಶ್ಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.