ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Posted On: 25-09-2023 04:34PM

ಪಡುಬಿದ್ರಿ : ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಸೋಮವಾರ ಪಡುಬಿದ್ರಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಎಲ್ಲದಡಿ ಅವರ ನಿವಾಸದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ನಡೆಯಿತು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಗಣ್ಯರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಧೀರಜ್ ಮತ್ತಿತರರು ಉಪಸ್ಥಿತರಿದ್ದರು.