ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆ ಸಾಧ್ಯತೆ
Posted On:
29-09-2023 08:31PM
ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಆರೆಂಜ್ ಅಲರ್ಟ್, 30 ಮತ್ತು ಅಕ್ಟೋಬರ್ 1 ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 45-55 ಕಿ.ಮೀ ನಿಂದ 65ಕಿ.ಮೀ ವರೆಗೆ ಬಿರುಗಾಳಿ ಬೀಸಬಹುದು ಎಂದು ತಿಳಿಸಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ. ಸಾರ್ವಜನಿಕರು ನದಿ/ನೀರಿರುವ ಪ್ರದೇಶ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ ಮರಗಳ ಹತ್ತಿರ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ