ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಶಾಸಕರು, ಉದ್ಯಮಿಗಳು, ಗಣ್ಯರ ಸಮಾಲೋಚನಾ ಸಭೆಯು ಅಕ್ಟೋಬರ್ 3 ರಂದು
ಮಾರಿಗುಡಿಯ ನವದುರ್ಗಾ ಮಂಟಪದಲ್ಲಿ ನಡೆಯಿತು.
ಗಣ್ಯ ಮಹಿಳೆಯರಾದ ನಿರುಪಮಾ ಪ್ರಸಾದ್, ಸ್ವಪ್ನ ಸುರೇಶ್, ವಿಜಯ ಗೋಪಾಲ ಬಂಗೇರ, ಕವಿತ ಹರೀಶ್, ಬೇಬಿ ಕುಂದರ್, ಅಮೃತಾ ಕೃಷ್ಣ ಮೂರ್ತಿ, ಸ್ವರೂಪ ಶೆಟ್ಟಿ, ಮೀನಾ ಅಡ್ಯಂತಾಯ, ರೂಪಾ ಶೋಧನ್ ಶೆಟ್ಟಿ ಸಮಾಲೋಚನಾ ಸಭೆಯನ್ನು ದೀಪ ಬೆಳಗಿಸಿ ಅಮ್ಮನಿಗೆ ಆರತಿ ಎತ್ತುವ ಮೂಲಕ ಉದ್ಘಾಟಿಸಿದರು.
ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ ಅವರ ನೇತೃತ್ವದಲ್ಲಿ ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ದರ್ಶನ ಸೇವೆಯಲ್ಲಿ ಅಭಯ ಪ್ರಸಾದ ನೀಡಲಾಯಿತು. ನಂತರ ಸಂಪೂರ್ಣ ಇಳಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಹೊಸ ಮಾರಿಗುಡಿ, ಉಚ್ಚಂಗಿ ಗುಡಿ ಸಹಿತವಾಗಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ, ಪರಿಶೀಲಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಮಿತಿ ಕಾರ್ಯಾಧ್ಯಕ್ಷ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮುಂದಿನ 1200 ವರ್ಷಗಳವರೆಗೆ ಬಾಳಿಕೆ ಬರುವಂತಹ ಇಳಕಲ್ ಶಿಲೆಯನ್ನು ಬಳಸಿಕೊಂಡು ಹೊಸ ಮಾರಿಗುಡಿ ಜೀರ್ಣೋದ್ಧಾರಗೊಳ್ಳುತ್ತಿದೆ. ಜೀರ್ಣೋದ್ಧಾರಕ್ಕೆ ಎಲ್ಲೆಡೆ ಉತ್ತಮ ಸ್ಪಂದನೆ ದೊರಕುತ್ತಿದೆ. ಪ್ರಪಂಚದ 18 ದೇಶಗಳಲ್ಲಿ ಸಮಿತಿ ರಚಿಸಲಾಗಿದ್ದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಮಿತಿ ರಚಿಸಲು ಒತ್ತು ನೀಡಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕಾರದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದರು.
ಜಿಲ್ಲೆಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಯಶ್ಪಾಲ್ ಸುವರ್ಣ, ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಗಣ್ಯರಾದ ಜೆರ್ರಿ ವಿನ್ಸೆಂಟ್ ಡಯಾಸ್, ಬಿ.ಎನ್. ಶಂಕರ ಪೂಜಾರಿ, ಜಯ ಸಿ. ಕೋಟ್ಯಾನ್, ಗೋಪಾಲ್ ಬಂಗೇರ, ರಮೇಶ್ ಕಾಂಚನ್, ಜನಾರ್ದನ ತೋನ್ಸೆ, ಅಶೋಕ್ ಶೆಟ್ಟಿ, ಪಿ. ಕಿಶನ್ ಹೆಗ್ಡೆ, ಅಜಯ್ ಪಿ. ಶೆಟ್ಟಿ, ವಿ.ಜಿ. ಶೆಟ್ಟಿ, ಮೋಹನಚಂದ್ರ ನಂಬಿಯಾರ್, ನವೀನ್ ಅಡ್ಯಂತಾಯ, ದಿವಾಕರ್ ಸನಿಲ್, ಶೋಧನ್ ಕುಮಾರ್ ಶೆಟ್ಟಿ ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ವಾಗ್ಧಾನ ನೀಡಿದರು.
ಪ್ರಮುಖರಾದ ಕೆ. ಉದಯ ಕುಮಾರ್ ಶೆಟ್ಟಿ, ನಾಗೇಶ್ ಹೆಗ್ಡೆ, ಸಾಧು ಸಾಲ್ಯಾನ್, ಆನಂದ್ ಕುಂದರ್, ಮಟ್ಟಾರು ರತ್ನಾಕರ್ ಹೆಗ್ಡೆ, ಜಯಕರ್ ಶೆಟ್ಟಿ ಇಂದ್ರಾಳಿ, ಮನೋಹರ್ ಶೆಟ್ಟಿ ತೊನ್ಸೆ, ಕುಯಿಲಾಡಿ ಸುರೇಶ್ ನಾಯಕ್, ಶ್ರೀಕಾಂತ್ ಹೆಬ್ರಿ, ಕಿರಣ್ ಕುಮಾರ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಸುಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ, ಸುರೇಶ್ ಶೆಟ್ಟಿ ಉಡುಪಿ, ಉದಯ ಶೆಟ್ಟಿ ಇನ್ನ, ಶ್ರೀಪತಿ ಭಟ್, ಸುಧಿರ್ ಶೆಟ್ಟಿ, ಕೀರ್ತಿ ಅಂಬಲಪಾಡಿ, ರಾಮದಾಸ್ ಶೆಟ್ಟಿಗಾರ್, ಸುರೇಂದ್ರ ಪಣಿಯೂರು, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ರೇಷ್ಮಾ ಯು. ಶೆಟ್ಟಿ, ವಿವಿಧ ಸಮುದಾಯ ಮತ್ತು ರಾಜಕೀಯ ಪಕ್ಷಗಳ ಮುಖಂಡರು, ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಗಂಗಾಧರ ಸುವರ್ಣ, ಮನೋಹರ ಶೆಟ್ಟಿ, ಮಾಧವ ಆರ್. ಪಾಲನ್, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಜಿ. ಲೀಲಾಧರ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರುಗಳಾದ ರತ್ನಾಕರ ಹೆಗ್ಡೆ ಕಲ್ಯಾ, ರಮೇಶ್ ಶೆಟ್ಟಿ ಕಾಪು ಕೊಲ್ಯ, ಪ್ರಚಾರ ಸಮಿತಿಯ ಸಂಚಾಲಕರುಗಳಾದ ಜಯರಾಮ್ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಆರ್ಥಿಕ ಸಮಿತಿಯ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಪ್ರಸ್ತಾವನೆಗೈದರು. ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು. ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.