ಕಾಪು : ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಕುರಿತು ಬುಧವಾರ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪೂರ್ವ ಸಿದ್ಧತಾ ಸಭೆ ಜರಗಿತು.
ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯ ನೋಂದಾವಣೆ ಹಾಗೂ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿ ಗರಿಷ್ಠ ಮತದಾರ ಪಟ್ಟಿಯನ್ನು ತಯಾರಿಸುವ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕಾಪು
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಶಾಸಕರಾದ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಮುರಳಿಧರ್ ಪೈ, ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.