ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಲಿಮಾರು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Posted On: 13-10-2023 07:20PM

ಪಲಿಮಾರು : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ, ತಂದೆ ತಾಯಿಯ ಪ್ರೀತಿ ಹಾಗೂ ತ್ಯಾಗವನ್ನು ಅರ್ಥ ಮಾಡಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್ ಶಿರ್ವ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆ ಬೋಧಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರುತಿ, ಸೇವಾ ಪ್ರತಿನಿಧಿಗಳು, ಉಪನ್ಯಾಸಕರಾದ ಜ್ಯೋತಿ, ಚೈತ್ರ, ನಿಶಾ, ಸ್ವಾತಿ, ಅಮೃತ ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಪವಿತ್ರ ಸ್ವಾಗತಿಸಿದರು. ಸಮಾಜಶಾಸ್ತ್ರ ಉಪನ್ಯಾಸಕರಾದ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರೌಢ ಶಾಲಾ ಹಿರಿಯ ಸಹಶಿಕ್ಷಕರಾದ ಸುನಿತಾ ವಂದಿಸಿದರು.