ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಸತತ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ; ಅಭಿನಂದನಾ ಸಮಾರಂಭ

Posted On: 14-10-2023 12:50PM

ಕಾಪು : ಸತತ 3 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾಮ‌ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭವು ಇಂದು ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮನ್ನು ಉದ್ಘಾಟಿಸಿ, ಸಿಬ್ಬಂದಿವರ್ಗವನ್ನು ಅಭಿನಂದಿಸಿದರು.

80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ "ಗಾಂಧಿ ಗ್ರಾಮ ಪುರಸ್ಕಾರ" ಲಭಿಸಿದ್ದು, ಇದಕ್ಕೆ ಕಾರಣಿಕರ್ತರಾದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು 80 ಬಡಗಬೆಟ್ಟು ಮೂಡುಮನೆ ಇವರ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಆರ್ಬಿ ವೈಶ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಯರಾಜ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್, 80 ಬಡಗಬೆಟ್ಟು ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್, 80 ಬಡಗಬೆಟ್ಟು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ವಿದ್ವಾನ್ ವೆಂಕಟಾಚಲ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್ ಹಾಗೂ ಬಿ. ಶ್ರೀನಾಥ್ ಹೆಗ್ಡೆ, ಬಿ. ಅರುಣಾಚಲ ಹೆಗ್ಡೆ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಉಪೇಂದ್ರ ನಾಯಕ್, ಶಾಂತಾರಾಮ್, ಶುಭಕರ್ ಶೆಟ್ಟಿ, ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.