ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ ದಲ್ಲಿ ದಸರಾದ ಪ್ರಯುಕ್ತ ಶನಿವಾರ ಸಂಜೆ ವಿದ್ಯುದ್ದೀಪಾಲಂಕಾರ ಪ್ರಾಯೋಜಕರಾದ MRG ಗ್ರೂಪ್ ಅಧ್ಯಕ್ಷರಾದ ಬಂಜಾರ ಪ್ರಕಾಶ್ ಶೆಟ್ಟಿ ವಿದ್ಯುದ್ದೀಪಾಲಂಕಾರಕ್ಕೆ ಚಾಲನೆ ನೀಡಿದರು.
ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಬಾರಿಯು ಉಚ್ಚಿಲ ದಸರಾವು ಅಕ್ಟೋಬರ್ 15 ರಿಂದ 24 ರವರೆಗೆ ನಡೆಯಲಿದೆ.
ದೇವಸ್ಥಾನದ ಪಕ್ಕದ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಮತ್ತು ವಿಗ್ರಹ ಉತ್ಸವಕ್ಕೆ ಅಕ್ಟೋಬರ್ 15 (ನಾಳೆ) ಚಾಲನೆ ದೊರಕಲಿದೆ. ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಚಾಲನೆ ನೀಡಲಿದ್ದು ಬಳಿಕ ಮಹಾಲಕ್ಷ್ಮೀ ಅನ್ನಛತ್ರ ಮತ್ತು ಅತಿಥಿಗೃಹ
ಲೋಕಾರ್ಪಣೆಗೊಳ್ಳಲಿದೆ. ಕೊನೆ ಕ್ಷಣದ ಸಿದ್ಧತೆಗಳು ಪೂರ್ಣಗೊಂಡಿದೆ.
ದೇವಳದ ಸುತ್ತಮುತ್ತಲಿನ ಪ್ರದೇಶ, ಬೀದಿಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದ್ದು, ಭಕ್ತಾದಿಗಳು ಈ ವೈಭವವನ್ನು ತಮ್ಮ ಮೊಬೈಲ್ ಗಳಲ್ಲಿ ಕ್ಲಿಕ್ಕಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಈ ಸಂದರ್ಭ ದೇವಳದ ಗೌರವ ಸಲಹೆಗಾರರಾದ
ನಾಡೋಜ ಡಾ. ಜಿ. ಶಂಕರ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ದ. ಕ. ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ದೇವಳದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಹಿಳಾ ಘಟಕ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕು ಪಟ್ಣ ಮೊಗವೀರ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ, ಉಪಾಧ್ಯಕ್ಷ ಸುಭಾಶ್ಚಂದ್ರ, ಕಾರ್ಯದರ್ಶಿ ಸುಧಾಕರ್ ಕುಂದರ್, ಅನಿಲ್ ಕುಮಾರ್, ಶಂಕರ್ ಸಾಲ್ಯಾನ್, ದಿನೇಶ್ ಮೂಳೂರು, ಗಂಗಾಧರ ಸುವರ್ಣ ಎರ್ಮಾಳು, ಸತೀಶ್ ಬಾರ್ಕೂರು, ರವೀಂದ್ರ ಶ್ರೀಯಾನ್, ಸತೀಶ್ ಅಮೀನ್ ಬಾರ್ಕೂರು, ದೇವಳದ ಮುಖ್ಯ ಪ್ರಬಂಧಕ ಸತೀಶ್ ಅಮೀನ್ ಮಟ್ಟು ಉಪಸ್ಥಿತರಿದ್ದರು.