ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಕೊಳಲಗಿರಿ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ

Posted On: 08-11-2023 05:58PM

ಉಡುಪಿ : ಜಿಲ್ಲೆಯ ಪ್ರಮುಖ ಸೇವಾ ಸಂಸ್ಥೆಯಾದ ಹೋಮ್ ಡಾಕ್ಟರ್ ಫೌಂಡೇಶನ್ ಇದರ ವತಿಯಿಂದ ವಿಶಿಷ್ಟ ರೀತಿಯಲ್ಲಿ ಸಾಮೂಹಿಕ ದೀಪ ಬೆಳಗಿಸುವುದರೊಂದಿಗೆ ದೀಪಾವಳಿ ಹಬ್ಬವನ್ನು ನವೆಂಬರ್ 7 ರಂದು ಆಚರಿಸಲಾಯಿತು. ಕೊಳಲಗಿರಿ ಸಂತೆ ಮಾರುಕಟ್ಟೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಮಾಜ ಸೇವಕರಾದ ಗೀತಾ ಶೆಟ್ಟಿ, ರಾಜೇಶ್ ರೈ, ಸಚ್ಚಿದಾನಂದ ಹೆಗ್ಡೆ, ಉದ್ಯಮಿಗಳಾದ ಯದುನಾಥ್, ಸದಾನಂದ ಶೆಟ್ಟಿ ಇವರು ಭಾಗವಹಿಸಿ ಶುಭ ಹಾರೈಸಿದರು.

ಸಂಸ್ಥೆಯ ಪ್ರಮುಖರಾದ ಡಾ| ಶಶಿಕಿರಣ್ ಶೆಟ್ಟಿ ಮಾತನಾಡಿ ಹೋಮ್ ಡಾಕ್ಟರ್ ಫೌಂಡೇಶನ್ ನಡೆದು ಬಂದ ಹಾದಿ ಮತ್ತು ವಿವಿಧ ಕಾನ್ಸೆಪ್ಟ್ ಗಳ ಮೂಲಕ ಸಮಾಜ ಸೇವೆಗಳ ವಿವರಗಳನ್ನು ಸಭೆಗೆ ತಿಳಿಸಿದರು. ವೇದಿಕೆಯಲ್ಲಿ ಡಾ| ಸುಮಾ ಎಸ್ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಲವಾರು ಅಸಹಾಯಕ ರೋಗಿಗಳಿಗೆ ಸಹಾಯಧನ ಮತ್ತು ಅಕ್ಕಿ ಸೇರಿದಂತೆ ದಿನಬಳಕೆ ವಸ್ತುಗಳನ್ನು ವಿತರಿಸಲಾಯಿತು. ನಂತರ ಶಾರದ ಅಂಧ ಕಲಾವಿದ ತಂಡದಿಂದ ಸುಗಮ ಸಂಗೀತ ಕಾಯ೯ಕ್ರಮ ನಡೆಯಿತು.

ಸಂಸ್ಥೆಯ ಸದಸ್ಯರಾದ ರಾಘವೇಂದ್ರ ಪೂಜಾರಿ, ಬಂಗಾರಪ್ಪ, ಸುಜಯ, ರಾಜೇಂದ್ರ, ಗಣೇಶ್, ಸುಂದರ ಪೂಜಾರಿ, ದಯಾನಂದ ಪೂಜಾರಿ, ರಾಘವೇಂದ್ರ ಕವಾ೯ಲು ಮುಂತಾದವರಿದ್ದರು. ರೋಷನ್ ಡಿಸೋಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.