ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ : ಡಾ. ಪ್ರತಿಭ ಆರ್.
Posted On:
11-11-2023 11:20PM
ಕಾಪು : ಇಲ್ಲಿನ ತಹಶಿಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾಪು ತಾಲ್ಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್ ರವರು ಜ್ಯೋತಿ ಬೆಳಗಿಸಿ ವೀರವನಿತೆ ಓಬವ್ವನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಅವರು ವೀರವನಿತೆ ಒನಕೆ ಓಬವ್ವ ಅವರ ಧೈರ್ಯ-ಸ್ಥೈರ್ಯಗಳನ್ನು ಶ್ಲಾಘಿಸಿದರು. ಆಕೆ ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಒಂದು ಸಾಮ್ರಾಜ್ಯದ ಉಳಿವಿಗೆ ಕಾರಣಳಾದಳು. ನಮ್ಮ ಹೆಣ್ಣುಮಕ್ಕಳು ಕೂಡಾ ಆಕೆಯಂತೆ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭ ಉಪ ತಹಶಿಲ್ದಾರ್ ಅಶೋಕ್ ಎನ್ ಕೋಟೆಕಾರ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.