ಕರಾವಳಿಯ ವಿವಿಧೆಡೆ ಸೋಮವಾರ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು.
ಕಾಪು, ಮಲ್ಪೆ, ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಪೊಲಿಪು, ಕೈಪುಂಜಾಲು, ಮೂಳೂರು ಸಹಿತವಾಗಿ ಕರಾವಳಿಯಾದ್ಯಂತ ಇರುವ ಮೊಗವೀರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರಗಳು ಮತ್ತು ಪ್ರಾರ್ಥನಾ ಮಂದಿರಗಳ ಸಹಕಾರದೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು.
ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ಸಮುದ್ರ ಪೂಜೆ ನಡೆಸುವ ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಿಸುವಂತೆ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸುತ್ತಾರೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಸಹಿತ ವಿವಿಧ ಗಣ್ಯರು, ಸಮಾಜದ ಮುಖಂಡರು, ಮೊಗವೀರ ಮಹಾಸಭೆ,ಯ ಪದಾಧಿಕಾರಿಗಳು, ಸದಸ್ಯರು, ಮೊಗವೀರ ಪ್ರತಿನಿಧಿಗಳು ಉಪಸ್ಥಿತರಿದ್ದರು.