ಕಾಪು ಮಾರಿಗುಡಿ ಜೀರ್ಣೋದ್ಧಾರ : ಕೋಟೆ ಗ್ರಾಮ ಸಮಿತಿ ರಚನಾ ಸಭೆ ಸಂಪನ್ನ
Posted On:
14-11-2023 03:10PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಗ್ರಾಮ ಸಮಿತಿ ರಚಿಸಿ, ಪ್ರತಿ ಮನೆಗೂ ಮನವಿ ಪತ್ರ ತಲುಪಿಸಿ ಅಮ್ಮನ ಅಭಯ ವಾಕ್ಯದಂತೆ ದೇವಳ ನಿರ್ಮಾಣದ ವಿಷಯ ಪ್ರಪಂಚದ ಮೂಲೆ ಮೂಲೆಗೂ ತಲುಪಬೇಕೆನ್ನುವುದು ಅಭಿವೃದ್ಧಿ ಸಮಿತಿಯ ಆಶಯದಂತೆ ಶನಿವಾರ ಸಂಜೆ ಕೋಟೆ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ, ಮಂಜ ಶ್ರೀ ನಾಗ ಬ್ರಹ್ಮಾದಿ ಪಂಚದೈವಿಕ ಸನ್ನಿಧಿಯಲ್ಲಿ ಜರಗಿತು.
ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ಶಾರದಾ ಡಿ. ಕೆ, ಸ್ಮಿತಾ ಪ್ರವೀಣ್ ಕಾಂಚನ್, ಗೀತಾ ಲಕ್ಷ್ಮಣ್, ಚಂದ್ರಿಕಾ ಚಂದ್ರಹಾಸ್, ಶಶಿಪ್ರಕಾಶ್, ವನಿತಾ ನಾಗೇಶ್, ಬೇಬಿ ಜಿ. ಕರ್ಕೇರ, ಅಶ್ವಿನಿ ಸುನೀಲ್ ಮತ್ತು ಮಾಲತಿ ಶಂಕರ್ ಇವರು ಏಕಕಾಲದಲ್ಲಿ ದೀಪ ಬೆಳಗಿಸಿ ಅಮ್ಮನಿಗೆ ಆರತಿ ಎತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ನಂತರ ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಸುವರ್ಣ ಮಾತನಾಡಿ ಅಮ್ಮನ ಸೇವೆ ಮಾಡುವುದು ನಮ್ಮೆಲ್ಲರ ಭಾಗ್ಯ,ಈ ಅವಕಾಶ ಮತ್ತೆಂದೂ ಸಿಗದು ಗ್ರಾಮ ಸಮಿತಿಯ ಮುಖೇನ ನಾವೆಲ್ಲರೂ ಅಮ್ಮನ ಸೇವೆಯನ್ನು ಮಾಡಲು ಕಾರ್ಯಪ್ರವೃತರಾಗೋಣ ಎಂದರು.
ಉಪಾಧ್ಯಕ್ಷರಾದ ಮಾಧವ ಆರ್ ಪಾಲನ್ ಗ್ರಾಮ ಸಮಿತಿಯ ದ್ಯೇಯೋದ್ದೇಶಗಳನ್ನು ತಿಳಿಸುವ ಮೂಲಕ ಗ್ರಾಮದ ಪ್ರತೀ ಮನೆಯಿಂದಲೂ ಕನಿಷ್ಠ ಒಂಬತ್ತು ಶಿಲಾಸೇವೆಯನ್ನು (ರೂಪಾಯಿ 9,999) ನೀಡುವ ಮೂಲಕ "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರಬೇಕು ಎಂದು ವಿನಂತಿಸಿದರು.
ನಂತರ ಗ್ರಾಮ ಸಮಿತಿಯನ್ನು ರಚನೆ ಮಾಡಿ ಕೋಟೆ ಗ್ರಾಮದ 9 ಜನ ಪುರುಷರ 1 ತಂಡ ಮುಖ್ಯ ಸಂಚಾಲಕರಾಗಿ ಚಂದ್ರಹಾಸ್ ಕೋಟ್ಯಾನ್ ಹಾಗೂ 9 ಜನ ಮಹಿಳೆಯರ 1 ತಂಡ ಮುಖ್ಯ ಸಂಚಾಲಕರಾಗಿ ಶಾರದಾ ಡಿ. ಕೆ ಇವರನ್ನು ಆಯ್ಕೆ ಮಾಡಲಾಯಿತು.
ಗ್ರಾಮದ ಪ್ರತಿ ಮನೆ ಮನೆಗೆ ತಲುಪಿಸುವ ಮನವಿ ಪತ್ರವನ್ನು ಮತ್ತು ಸ್ಟಿಕ್ಕರನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮದ ಪ್ರಮುಖರಿಗೆ ಹಸ್ತಾಂತರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪ್ರವೀಣ್ ಕಾಂಚನ್ ವಹಿಸಿದ್ದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಭಾತ್ ಶೆಟ್ಟಿ ಮೂಳೂರು, ಪ್ರಚಾರ ಸಮಿತಿಯ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್, ಕೋಟೆ ಗ್ರಾಮದ ಪ್ರಮುಖರಾದ ಸದಿಯ ಸುವರ್ಣ ಕೋಟೆ, ಸಂಜೀವ ಮೆಂಡನ್, ಜಗನ್ನಾಥ ಕೋಟೆ, ಶೇಖರ್ ಸುವರ್ಣ, ಪಂಡರಿನಾಥ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರವೀಣ್ ಕಾಂಚನ್ ಉಪಸ್ಥಿತರಿದ್ದರು.
ಪ್ರಕಾಶ್ ಸುವರ್ಣ ಕಟಪಾಡಿ ಸ್ವಾಗತಿಸಿದರು. ಜೀರ್ಣೋದ್ಧಾರದ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಪ್ರಸ್ತಾವನೆಗೈದರು.