ಉಡುಪಿ : ನೆಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಆರೋಪಿಯ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ ಅಬ್ದುಲ್ ಜಬ್ಬಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಉಡುಪಿಯ ಕಾಂಗ್ರೆಸ್ ಮುಖಂಡರು, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಗಳಾದ ಫಾರೂಕ್ ಚಂದ್ರನಗರ ಹಾಗೂ ಹಸನ್ ಶೇಕ್ ಮಣಿಪುರ ನಿನ್ನೆ ಕೆ.ಪಿ.ಸಿ.ಸಿ ಕಚೇರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತ ಸಭೆಯಲ್ಲಿ ಮನವಿ ನೀಡಿದರು.
ಆರೋಪಿಯ ಈ ತರ ಕೃತ್ಯ ಸಮಾಜದಲ್ಲಿ ಜನರು ಬೆಚ್ಚಿ ಬಿಳಿಸುವಂತಾಗಿದೆ. ಅವನ ಹಿಂದೆ ಯಾರು ಇದ್ದಾರೆ ಅವನ ದುರುದ್ದೇಶ ಬಯಲು ಮಾಡಿ ಸಮಾಜದಲ್ಲಿ ಶಾಂತಿ ಉಂಟಾಗಬೇಕು ಇನ್ನೊಬ್ಬರಿಗೆ ಇದು ಪಾಠವಾಗಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತ ಜಿಲ್ಲಾ ಅಧ್ಯಕ್ಷರು, ಹಾಗೂ ರಾಜ್ಯ ಕೆ.ಪಿ.ಸಿ.ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.