ಪಡುಬಿದ್ರಿ : ಪಂಚಾಯತ್ ಸದಸ್ಯನಿಂದ ಅಧಿಕಾರಿಗೆ ಬೆದರಿಕೆ
Posted On:
19-11-2023 11:18AM
ಪಡುಬಿದ್ರಿ : ಇಲ್ಲಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರಿಗೆ ಪಂಚಾಯತ್ ಸದಸ್ಯರೋರ್ವರು ಬೆದರಿಕೆ ಹಾಕಿರುವ ಘಟನೆ ನವೆಂಬರ್ 17ರಂದು ಪಡುಬಿದ್ರಿ ಪಂಚಾಯತ್ ನಲ್ಲಿ ನಡೆದಿದೆ.
ಕಾಪು ತಾಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ರವರು ತನ್ನ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿರುವಾಗ ಪಡುಬಿದ್ರಿ ಗ್ರಾಮ ಪಂಚಾಯತ್‌ನ ಸದಸ್ಯ ಮಯ್ಯದ್ದಿ ಎಂಬುವವರು ಕಛೇರಿಗೆ ನುಗ್ಗಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿರುವ ಬಗ್ಗೆ ಮಂಜುನಾಥರವರು ಪೊಲೀಸರಿಗೆ ದೂರನ್ನು ನೀಡಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.