ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ದಿವಾಕರ ಶೆಟ್ಟಿಗೆ ಸಹಕಾರಿ ಕ್ಷೇತ್ರದ ಸಹಕಾರ ರತ್ನ ಪ್ರಶಸ್ತಿ

Posted On: 19-11-2023 12:13PM

ಕಾಪು : ಕರ್ನಾಟಕ ರಾಜ್ಯ ಹಾಲು ಮಹಾ ಮಂಡಳಿಯ ರಾಜ್ಯ ನಿರ್ದೇಶಕ, ಕೃಷಿ, ಸಹಕಾರಿ ಮತ್ತು ಉದ್ಯಮ ಕ್ಷೇತ್ರದ ಸಾಧಕ ಕಾಪು ದಿವಾಕರ ಶೆಟ್ಟಿ ಅವರಿಗೆ ಸಹಕಾರಿ ಕ್ಷೇತ್ರದ ರಾಜ್ಯಮಟ್ಟದ ಅತ್ಯುನ್ನತ ಸಹಕಾರ ರತ್ನ ಪ್ರಶಸ್ತಿ ದೊರೆತಿದೆ.

ವಿಜಯಪುರದಲ್ಲಿ ನವೆಂಬರ್ 20ರಂದು ನಡೆಯಲಿರುವ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಾಪು ಕೋತ್ವಾಲ್‌ ಗುತ್ತು ನಿವಾಸಿಯಾಗಿರುವ ಅವರು ದೀರ್ಘ ಕಾಲ ದ.ಕ. ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ಎರಡು ಅವಧಿಗೆ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಪ್ರವರ್ತಕ, ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದು, ಕಳೆದ 33 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕಾಪು ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷರಾಗಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾಗಿದ್ದಾರೆ.

ದ.ಕ. ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕಾಪು ಜನಾರ್ದನ ದೇವಸ್ಥಾನ, ಕಾಪು ಮೂರನೇ ಮಾರಿಗುಡಿಗಳ ಟ್ರಸ್ಟಿ, ಉಳಿಯಾರಗೋಳಿ ಗ್ರಾಪಂ ಅಧ್ಯಕ್ಷ, ದಕ್ಷಿಣ ರೈಲ್ವೆ ಮತ್ತು ದ.ಕ. ಜಿಲ್ಲಾ ಟೆಲಿಕಾಂ ಸಲಹಾ ಮಂಡಳಿ ಸದಸ್ಯ, ರಾಜ್ಯ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಪ್ರಶಸ್ತಿ, ಅತ್ಯುತ್ತಮ ಹೈನುಗಾರ ಪ್ರಶಸ್ತಿ ಹಾಗೂ ಅಂತಾರಾಷ್ಟ್ರೀಯ ಆರ್ಯಭಟ ಭಾಜನರಾಗಿದ್ದಾರೆ.