ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ

Posted On: 20-11-2023 08:18PM

ಪಡುಬಿದ್ರಿ‌ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ, ಉಡುಪಿ. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಪಡುಬಿದ್ರಿ ಸಹಕಾರ ಸಂಗಮ ವೈ ಲಕ್ಷ್ಮಣ ಸಭಾಂಗಣದಲ್ಲಿ ಆಯೋಜಿಸಲಾದ "70ನೇ ಅಖಿಲ ಭಾರತ ಸಹಕಾರ ಸಪ್ತಾಹ" ಸಮಾರೋಪ ಸಮಾರಂಭವನ್ನು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ। ಎಮ್. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ರೈತರಿಗೆ ಅನುಕೂಲಕರವಾದ ಸಹಕಾರಿ ‌ಸಂಸ್ಥೆಗಳು ಬಹು ಬೇಗನೆ ಅವರಿಗೆ ಬೇಕಾದ ಹಣಕಾಸಿನ ಸಹಾಯದ ಜೊತೆಗೆ ಇತರೆ ವ್ಯವಸ್ಥೆಗೆ ಪೂರಕವಾಗಿದೆ. ನಮ್ಮ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಇತರೆಡೆಗಳಿಗೆ ಮಾದರಿ ಎನಿಸಿದೆ. ಸಮಾಜಮುಖಿ ಕೆಲಸಗಳಿಗೆ ಸಹಕಾರಿ ಕ್ಷೇತ್ರವು ಪ್ರೋತ್ಸಾಹಿಸುತ್ತಿದೆ ಎಂದರು. ಭಾರತದಲ್ಲಿ ಸಹಕಾರಿ ಕ್ಷೇತ್ರಕ್ಕೆ 119 ವರ್ಷಗಳ ಇತಿಹಾಸವಿದೆ ಎಂದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನವೀಕೃತ ಹವಾ ನಿಯಂತ್ರಿತ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು.

ಕುರ್ಚಿ/ಸಹಾಯ ಧನ ವಿತರಣೆ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ವತಿಯಿಂದ ಸ್ವಸಹಾಯ ಗುಂಪಿಗೆ 25 ಪ್ಲಾಸ್ಟಿಕ್ ಕುರ್ಚಿಗಳನ್ನು ಮತ್ತು ಸುಮಾರು 200 ರೈತರಿಗೆ ತಲಾ 3 ಸಾವಿರ ರೂ. ನಂತೆ ಸಹಾಯಧನವನ್ನು ವಿತರಿಸಲಾಯಿತು. ಸನ್ಮಾನ : ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ಮಂಗಳೂರು ಇದರ ಅಧ್ಯಕ್ಷರಾದ ಡಾ। ಎಮ್. ಎನ್. ರಾಜೇಂದ್ರ ಕುಮಾರ್, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪಡುಬಿದ್ರಿ ಗ್ರಾ. ಪಂ. ಅಧ್ಯಕ್ಷೆ ಶಶಿಕಲಾ ವೈ., ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ, ನಿವೃತ್ತ ಸಹಕಾರಿ ಮೇಲ್ವಿಚಾರಕ ಬಾಲಕೃಷ್ಣ ರಾವ್ ಅವರನ್ನು ಸಮ್ಮಾನಿಸಲಾಯಿತು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಸಹಕಾರಿ ಯೂನಿಯನ್ ನಿ. ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಬೆಳಪು ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ವೈ, ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ, ನಿವೃತ್ತ ಪ್ರಾಂಶುಪಾಲರು, ಜಾನಪದ ವಿದ್ವಾಂಸರಾದ ಗಣನಾಥ್ ಎಕ್ಕಾರ್, ಅಶೋಕ್ ಕುಮಾರ್ ಬಲ್ಲಾಳ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ನಿರ್ದೇಶಕರಾದ ಶಿವರಾಮ ಶೆಟ್ಟಿ, ಗಿರೀಶ್ ಪಲಿಮಾರು, ವಾಸುದೇವ ಪಲಿಮಾರು, ರಾಜಾರಾಮ್ ರಾವ್, ವೈ.ಜಿ.ರಸೂಲ್, ಯಶವಂತ್ ಪಡುಬಿದ್ರಿ, ಮಾಧವ ಆಚಾರ್ಯ, ಸ್ಟಾನ್ಲಿ  ಕ್ವಾಡ್ರಸ್, ಸುಚರಿತಾ ಎಲ್. ಅಮೀನ್, ಕಾಂಚನಾ, ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಕಾರಿ ದೀಪಕ್ ಸಾಲ್ಯಾನ್ ಉಪಸ್ಥಿತರಿದ್ದರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಪ್ರಸ್ತಾವಿಸಿ ಸ್ವಾಗತಿಸಿದರು. ಸೊಸೈಟಿಯ ನಿರ್ದೇಶಕರಾದ ಸುಚರಿತಾ ಎಲ್ ಅಮೀನ್ ಹಾಗೂ ಗಿರೀಶ್ ಪಲಿಮಾರು ಕಾರ್ಯಕ್ರಮ ನಿರ್ವಹಿಸಿದರು. ಸೊಸೈಟಿಯ ಉಪಾಧ್ಯಕ್ಷ ಗುರುರಾಜ ಪೂಜಾರಿ ವಂದಿಸಿದರು.