ಕಾಪು ಹೊಸ ಮಾರಿಗುಡಿ : ಕುದಿ - ಕೋಡಿಬೆಟ್ಟು ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಸಂಪನ್ನ
Posted On:
10-12-2023 09:05PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಗ್ರಾಮ ಸಮಿತಿ ರಚಿಸಿ, ಪ್ರತಿ ಮನೆಗೂ ಮನವಿ ಪತ್ರ ತಲುಪಿಸಿ ಅಮ್ಮನ ಅಭಯ ವಾಕ್ಯದಂತೆ ದೇವಳ ನಿರ್ಮಾಣದ ವಿಷಯ ಪ್ರಪಂಚದ ಮೂಲೆ ಮೂಲೆಗೂ ತಲುಪಬೇಕೆನ್ನುವುದು ಅಭಿವೃದ್ಧಿ ಸಮಿತಿಯ ಆಶಯದಂತೆ ಶನಿವಾರ ಕುದಿ - ಕೋಡಿಬೆಟ್ಟು ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಕುದಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಿತು.
ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ಲತಾ ವಿ. ಶೆಟ್ಟಿ, ಹೇಮಲತಾ ಶೆಟ್ಟಿ, ಸುಧಾ, ದೇವಕಿ ಐತಾಳ್, ಉಮಾ ಶೆಟ್ಟಿ, ಸಂಧ್ಯಾ ಶೆಟ್ಟಿ, ಶಕುಂತಲಾ, ರಂಜಿತಾ ಮತ್ತು ದಿಶಾ ಇವರು ಏಕಕಾಲದಲ್ಲಿ ದೀಪ ಬೆಳಗಿಸಿ ಆರತಿ ಎತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು ಮಾತನಾಡಿ ಗ್ರಾಮದ ಪ್ರತೀ ಮನೆಯಿಂದಲೂ ಕನಿಷ್ಠ ಒಂಬತ್ತು ಶಿಲಾಸೇವೆಯನ್ನು (ರೂಪಾಯಿ 9,999) ನೀಡುವ ಮೂಲಕ "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರಬೇಕು ಎಂದು ವಿನಂತಿಸಿದರು ಮತ್ತು ಗ್ರಾಮ ಸಮಿತಿಯ ದ್ಯೇಯೋದ್ದೇಶಗಳನ್ನು ತಿಳಿಸಿದರು.
ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ ಇವರ ಉಪಸ್ಥಿತಿಯಲ್ಲಿ ಗ್ರಾಮ ಸಮಿತಿಯನ್ನು ರಚನೆ ಮಾಡಿ ಕುದಿ ಮತ್ತು ಕೋಡಿಬೆಟ್ಟು ಗ್ರಾಮದ 9 ಜನ ಪುರುಷರ ಮತ್ತು ಮಹಿಳೆಯರ 5 ತಂಡಗಳನ್ನು ಮಾಡಲಾಯಿತು, ಗ್ರಾಮದ ಜವಾಬ್ದಾರಿಯನ್ನು ಕುದಿ ವಸಂತ್ ಶೆಟ್ಟಿ, ಶಿವರಾಮ್ ಶೆಟ್ಟಿ, ಗುರುರಾಜ್ ಭಟ್ ಮತ್ತು ಸುಧಾಕರ್ ಶೆಟ್ಟಿ ವಹಿಸಿಕೊಂಡರು.
ಸಮಿತಿಗೆ ಆಯ್ಕೆಯಾದವರು ಹೊಸ ಮಾರಿಗುಡಿ ದೇವಳದ ಜೀರ್ಣೋದ್ಧಾರದ ಬಗ್ಗೆ ಗ್ರಾಮದ ಪ್ರತಿ ಮನೆ ಮನೆಗೂ ಸುದ್ದಿ ತಲುಪಿಸುವ ಜವಾಬ್ದಾರಿಯನ್ನು ವಹಿಸಿಕೊಂಡರು.
ಗ್ರಾಮದ ಪ್ರತಿ ಮನೆ ಮನೆಗೆ ತಲುಪಿಸುವ ಮನವಿ ಪತ್ರವನ್ನು ಮತ್ತು ಸ್ಟಿಕ್ಕರನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮದ ಪ್ರಮುಖರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ದೇವಳದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ ಆಚಾರ್ಯ, ಪ್ರಭಾತ್ ಶೆಟ್ಟಿ ಮೂಳೂರು, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಎಂ.ಸುವರ್ಣ, ಗ್ರಾಮಸ್ಥರಾದ ರಾಘವೇಂದ್ರ ಪಾಟ್ಕರ್, ಪ್ರಸನ್ನ ಹೆಗ್ಡೆ, ಸಂಧ್ಯಾ ಶೆಟ್ಟಿ, ಸತೀಶ್ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸುಧಾಕರ ಶೆಟ್ಟಿ ಗುಂಡಿಬೈಲು ಸ್ವಾಗತಿಸಿದರು. ಜೀರ್ಣೋದ್ಧಾರದ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಪ್ರಸ್ತಾವನೆಗೈದರು.