ಬಂಟ್ಸ್ ಕತಾರ್ : ವಾರ್ಷಿಕ ಸಾಮಾನ್ಯ ಸಭೆ ; ಅಧ್ಯಕ್ಷರಾಗಿ ನವೀನ್ ಶೆಟ್ಟಿ ಇರುವೈಲ್ ಅವಿರೋಧ ಆಯ್ಕೆ
Posted On:
13-12-2023 12:14PM
ಭಾರತದ ರಾಯಭಾರ ಕಚೇರಿಯ ಅಧೀನದಲ್ಲಿ ಇಂಡಿಯನ್ ಕಲ್ಚರಲ್ ಸೆಂಟರ್ ಸಹವರ್ತಿ ಸಂಘಗಳಲ್ಲಿ ಒಂದಾದ ಬಂಟ್ಸ್ ಕತಾರ್ ತನ್ನ ಸದಸ್ಯರಿಗೆ ವೇದಿಕೆಯನ್ನು ಒದಗಿಸುವ ಮತ್ತು ಉತ್ತೇಜಿಸುವ ಮತ್ತು ರವಾನಿಸುವ ಮುಖ್ಯ ಉದ್ದೇಶದೊಂದಿಗೆ 2011 ರಲ್ಲಿ ಸ್ಥಾಪನೆಯಾದಾಗಿನಿಂದ ಯುವ ಪೀಳಿಗೆಗೆ ಸ್ಥಳೀಯ ಸಂಸ್ಕೃತಿ, ವಿವಿಧ ಸಾಮಾಜಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಇದರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ನವೀನ್ ಶೆಟ್ಟಿ ಇರುವೈಲ್ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಸುಬೋಧ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುಖರಾಮ ಶೆಟ್ಟಿ,
ಕೋಶಾಧಿಕಾರಿಯಾಗಿ ಸುನೀಲ್ ಶೆಟ್ಟಿ,
ಕ್ರೀಡಾ ಕಾರ್ಯದರ್ಶಿಯಾಗಿ ನವೀನ್ ಶೆಟ್ಟಿ ಮಡಂತ್ಯಾರು, ವಿಶೇಷ ಅಗತ್ಯಗಳ ಉಸ್ತುವಾರಿಯಾಗಿ ಪ್ರೀತನ್ ರೈ,
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಕ್ಷಿಣಿ ವಿಘ್ನೇಶ್ ಶೆಟ್ಟಿ,
ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ರೈ,
ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾ ಆದರ್ಶ ಶೇಣವ,
ಲಾಜಿಸ್ಟಿಕ್ ಮತ್ತು ಯುವ ಸಂಯೋಜಕರಾಗಿ ದಿನೇಶ್ ಶೆಟ್ಟಿ,
ಸದಸ್ಯತ್ವ ಮತ್ತು ಪರಿಸರ ಸಂಯೋಜಕರಾಗಿ ಮನೋಜ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಬಂಟ್ಸ್ ಕತಾರ್‌ನ ನಿರ್ಗಮಿತ ಅಧ್ಯಕ್ಷೆ ಡಾ.ಪದ್ಮಶ್ರೀ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ಉದ್ದೇಶಗಳನ್ನು ವಿವರಿಸಿ, ಶ್ಲಾಘಿಸಿದರು. ಅವರ ಆಡಳಿತ ಸದಸ್ಯರ ಸಾಮೂಹಿಕ ಪ್ರಯತ್ನಕ್ಕೆ ಮತ್ತು ಸಲಹಾ ಸಮಿತಿ, ಸದಸ್ಯರಿಂದ ದೊರೆತ ಬೆಂಬಲಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
ತಮ್ಮ ಅಧಿಕಾರಾವಧಿಯಲ್ಲಿ ನೀಡಿದ ಸಹಕಾರಕ್ಕಾಗಿ ನಿರ್ಗಮಿತ ಕಾರ್ಯಕಾರಿ ಮಂಡಳಿ ಮತ್ತು ಸಲಹಾ ಸಮಿತಿ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭ ಸ್ಥಾಪಕ ಅಧ್ಯಕ್ಷ ರವಿ ಶೆಟ್ಟಿ, ಮಾಜಿ ಅಧ್ಯಕ್ಷ ನವನೀತ ಶೆಟ್ಟಿ, ಹಿರಿಯ ಸದಸ್ಯರಾದ ರಾಮ್ ಮೋಹನ್ ರೈ, ರಾಮಚಂದ್ರ ಶೆಟ್ಟಿ ಅವರು ಹೊಸ ಸಮಿತಿಯನ್ನು ಅಭಿನಂದಿಸಿ ಮತ್ತು ನೂತನ ಆಡಳಿತ ಅವಧಿಯಲ್ಲಿ ಬಂಟ್ಸ್ ಕತಾರ್ ಇನ್ನು ಹೆಚ್ಚು ಎತ್ತರಕ್ಕೆ ಬೆಳೆಯಲಿ ಎಂದು ತಮ್ಮ ಶುಭಾಶಯಗಳನ್ನು ತಿಳಿಸಿದರು.
ಮಾಜಿ ಅಧ್ಯಕ್ಷ ಮತ್ತು ನಿರ್ಗಮಿತ ಸಲಹಾ ಸಮಿತಿ ಛೇರ್ಮನ್ ದೀಪಕ್ ಶೆಟ್ಟಿ, ಹಿಂದಿನ ಸಮಿತಿಯ ಸದಸ್ಯರು ಮತ್ತು ಬಂಟ್ಸ್ ಕತಾರ್ ಸದಸ್ಯರು ಉಪಸ್ಥಿತರಿದ್ದರು.
ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಮಾನಸ ಶೆಟ್ಟಿ ಗತ ಸಾಲಿನ ಚಟುವಟಿಕೆಗಳನ್ನು ಪ್ರಸ್ತುತಪಡಿಸಿದರು.
ಕೋಶಾಧಿಕಾರಿ ಮನೋಹರ ಶೆಟ್ಟಿ ಆಯವ್ಯಯ ಪತ್ರ ಮಂಡಿಸಿದರು.