ಇಂದು : ಲೇಖಕಿ ಅನಿತಾ ಪಿ. ತಾಕೊಡೆ ಯವರ 'ಸುವರ್ಣ ಯುಗ' ಕೃತಿ ಬಿಡುಗಡೆ ಸಮಾರಂಭ
Posted On:
14-01-2024 08:52AM
ಮಂಗಳೂರು : ಜನಸೇವಕ, ಶಿಕ್ಷಣಪ್ರೇಮಿ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ ಅನಿತಾ ಪಿ. ತಾಕೊಡೆ ಬರೆದಿರುವ 'ಸುವರ್ಣ ಯುಗ' ಕೃತಿ ಬಿಡುಗಡೆ ಸಮಾರಂಭ ಜನವರಿ 14, ಆದಿತ್ಯವಾರದಂದು (ಇಂದು) ಸಂಜೆ 4 ಗಂಟೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿವೃತ್ತ ಪ್ರಾಧ್ಯಾಪಕ ಅಡ್ವೆ ರವೀಂದ್ರ ಪೂಜಾರಿ ಹೇಳಿದರು.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸುವರು. ಕೇಂದ್ರದ ಮಾಜಿ ಮಾಜಿ ಸಚಿವ ಜನಾರ್ದನ ಪೂಜಾರಿ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಅಭಿನಂದನಾ ಭಾಷಣ ಮಾಡಲಿದ್ದಾರೆ.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಸುನಿಲ್ ಕುಮಾರ್, ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಬಿ. ಕೆ. ಹರಿಪ್ರಸಾದ್, ಹರೀಶ್ ಕುಮಾರ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಬಿ. ರಮಾನಾಥ ರೈ, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಗೋಪಾಲ ಪೂಜಾರಿ, ರುಕ್ಮಯ ಪೂಜಾರಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ನಮ್ಮ ಕುಡ್ಲ ವಾಹಿನಿ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ, ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.