ಕಾಪು : ನೂತನ ಇನ್ನಂಜೆ ಮಹಿಳಾ ಮಂಡಳಿಯ ಉದ್ಘಾಟನೆ
Posted On:
15-01-2024 11:11AM
ಕಾಪು : ನೂತನ ಇನ್ನಂಜೆ ಮಹಿಳಾ ಮಂಡಳಿಯನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಎಸ್‌ವಿಎಚ್ ಶಾಲೆಯ ದಾಸಭವನದಲ್ಲಿ ಜನವರಿ 13 ರಂದು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಮಾತೆಯರು ತಮ್ಮ ಮಕ್ಕಳಿಗೆ ನೀತಿ ಕಥೆಗಳನ್ನು ಹೇಳಿ ಆದರ್ಶಗಳನ್ನು ಮೈಗೂಡಿಸುವಂತೆ ಮಾಡಿ ತಾಯಿಯ ಮಮತೆ ಸಮಾಜವನ್ನೇ ತಿದ್ದುವಂತಾಗಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಮಹಿಳೆಯು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರುವ ಅವಕಾಶವಿದ್ದು ಸರಕಾರವು ಕೂಡ ಈ ನಿಟ್ಟಿನಲ್ಲಿ ಮಹಿಳೆಯರಿಗೆ ಪ್ರಯೋಜನವಾಗುವ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಇದರ ಸದುಪಯೋಗ ಎಲ್ಲಾ ಮಹಿಳೆಯರು ಪಡೆದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸಿ ಮುಂದೆ ಬರಬೇಕೆಂದು ತಿಳಿಸಿದರು.
ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳು ಮಣಿಪಾಲ ಇಲ್ಲಿನ ಉಪನ್ಯಾಸಕರಾದ ಅರ್ಪಿತ ಪ್ರಶಾಂತ್ ಶೆಟ್ಟಿ ಮಾತನಾಡಿ ಮಹಿಳೆಯರು ಕುಟುಂಬದ ಯುವಜನತೆ ಹಾದಿ ತಪ್ಪುವುದನ್ನು ತಡೆಯಲು ಹಾಗೂ ಅವರ ವೈಯಕ್ತಿಕ ಸಮಸ್ಯೆಗಳು, ಸಮಾಜದಲ್ಲಿ ಆಗುತ್ತಿರುವ ದೌರ್ಜನ್ಯಗಳ ವಿರುದ್ಧ ಕ್ರಿಯಾಶೀಲರಾಗಬೇಕು. ಮನೆಯಲ್ಲಿ ಇರುವ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು, ಮಾಹಿತಿ ನೀಡಲು ಸಹಕರಿಸಬೇಕು ಎಂದು ಕರೆ ನೀಡಿದರು.
ತಾಲೂಕು ಮಹಿಳಾ ಮಂಡಳಿಗಳ ಉಪಾಧ್ಯಕ್ಷರಾದ ಗೀತಾ ವಾಗ್ಳೆ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿರುವ ಸರಳ ಕಾಂಚನ್, ಎಸ್‌ವಿಎಚ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪುಂಡರಿಕಾಕ್ಷ ಕೊಡಂಚ ಸಂದರ್ಭೋಚಿತವಾಗಿ ಮಾತನಾಡಿದರು.
ಎಸ್‌ವಿಎಚ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಮಂಜುಳ ಎಸ್ ನಾಯಕ್, ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಕೆ ಶೆಟ್ಟಿ, ಇನ್ನಂಜೆ ಯುವಕ ಮಂಡಲದ ಉಪಾಧ್ಯಕ್ಷರಾದ ಮಧುಸೂದನ ಆಚಾರ್ಯ, ಇನ್ನಂಜೆ ಯುವತಿ ಮಂಡಲದ ಅಧ್ಯಕ್ಷೆ ಲಕ್ಷ್ಮಿ ವೈ ನಾಯಕ್, ನೂತನ ಮಹಿಳಾ ಮಂಡಳಿಯ ಗೌರವ ಸಲಹೆಗಾರರಾದ ಶಕ್ಕು ಬಾಯಿ ನಂದನ್ ಕುಮಾರ್, ಮಹಿಳಾ ಮಂಡಳಿಯ ಗೌರವಾಧ್ಯಕ್ಷರಾದ ಪುಷ್ಪ ರವೀಂದ್ರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೋಶಾಧಿಕಾರಿ ಪೂರ್ಣಿಮಾ ಸುರೇಶ್, ಜೊತೆ ಕಾರ್ಯದರ್ಶಿ ಅನಿತಾ ಮಥಾಯಸ್, ಕ್ರೀಡಾ ಕಾರ್ಯದರ್ಶಿ ಈಶ್ವರಿ, ಜೊತೆ ಕಾರ್ಯದರ್ಶಿ ಜಾನಕಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂಧ್ಯಾ ಬಾಲಕೃಷ್ಣ ಕೋಟ್ಯಾನ್, ಉಪಾಧ್ಯಕ್ಷರಾದ ವಸಂತಿ ಆಚಾರ್ಯ, ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ವೇತ ಲಕ್ಷ್ಮಣ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಸೀಮಾ ಮಾರ್ಗರೇಟ್ ಡಿಸೋಜ ಪ್ರಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮಂಡಳಿಯ ಉಪಾಧ್ಯಕ್ಷೆ ಆಶಾ ನಾಯಕ್ ಅತಿಥಿಗಳನ್ನು ಪರಿಚಯಿಸಿದರು. ಮಹಿಳಾ ಮಂಡಳಿಯ ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಸುಮಲತಾ ಶೇಖರ್ ನಿರೂಪಿಸಿದರು. ಕಾರ್ಯದರ್ಶಿ ಸಿಲ್ವಿಯಾ ವಿನಫ್ರೆಡ್ ಕ್ಯಾಸ್ತಲಿನೋ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಮಹಿಳಾ ಮಂಡಳಿಯ ಸದಸ್ಯರಿಂದ ಮನೋರಂಜನ ಕಾರ್ಯಕ್ರಮ ಜರಗಿತು.