ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ತಹಶಿಲ್ದಾರ್ ಕಚೇರಿಯಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Posted On: 20-01-2024 07:12AM

ಕಾಪು : ಕವಿ ಮತ್ತು ದಾರ್ಶನಿಕರಾಗಿದ್ದ ಮಹಾಯೋಗಿ ವೇಮನ ಅವರು ಸಮಾಜದಲ್ಲಿನ ಮೌಢ್ಯ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ತಮ್ಮ ಉತ್ಕೃಷ್ಟ ಜನಸಾಮಾನ್ಯರ ಭಾಷೆಯ ಸಾಹಿತ್ಯದ ಮೂಲಕ ನಿರಂತರವಾಗಿ ಶ್ರಮಿಸಿದರು ಎಂದು ಡಾ ಪ್ರತಿಭಾ ಆರ್ ಸ್ಮರಿಸಿದರು. ಕಾಪು ತಹಶಿಲ್ದಾರ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಮಹಾಯೋಗಿ ವೇಮನ ಜಯಂತಿ”ಯಲ್ಲಿ ಮಹಾಯೋಗಿ ವೇಮನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವದಲ್ಲಿ ವೇಮನ ನಂಬಿಕೆ ಇಟ್ಟಿದ್ದರು. ಸಮಾಜದ ಅಂಕುಡೊಂಕುಗಳನ್ನು ತಮ್ಮ ತೀಕ್ಷ್ಣ ಮೊನಚು ಚೌಪದಿಗಳ ಮೂಲಕ ಬಿಂಬಿಸಿ ಸಮಾಜದ ಪರಿವರ್ತನೆಗೆ ಕಾರಣರಾಗಿದ್ದರು. ವೇಮನರ ತತ್ವ ಮತ್ತು ಸಿದ್ಧಾಂತಗಳು ಸರ್ವ ಸಮುದಾಯಕ್ಕೂ ತಲುಪಬೇಕು. ವೇಮನರ ಪದ್ಯಗಳು ಕನ್ನಡ ತಮಿಳು ಮಲೆಯಾಳಿ ಇಂಗ್ಲಿಷ್ ಭಾಷೆಗಳಿಗೆ ಅನುವಾದಗೊಂಡಿವೆ. ವಿಶ್ವ ಸಾಹಿತ್ಯಕ್ಕೆ ಭೂಷಣ ಪ್ರಾಯವಾಗಿವೆ. ವೇಮನರ ತತ್ವ ಸಂದೇಶಗಳ ಜ್ಞಾನ ಮತ್ತು ಜಾಗೃತಿ ಜನರಲ್ಲಿ ಮೂಡಬೇಕು ಶಾಂತಿ ಸಮತೆ ಸೌಹಾರ್ದತೆಯ ಪರಿಮಳ ಜನಮನದಲ್ಲಿ ಪಸರಿಸುವಂತಾಗಬೇಕು ಎನ್ನುವ ಉದಾತ್ತ ಧ್ಯೇಯದೊಂದಿಗೆ ವೇಮನರ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭ ಉಪ ತಹಶೀಲ್ದಾರರಾದ ಅಶೋಕ್ ಎನ್ ಕೋಟೆಕಾರ್, ರವಿಕಿರಣ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸತೀಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.