ಪಲಿಮಾರು : ಸುವರ್ಣ ಪ್ರತಿಷ್ಠಾನ ಕರ್ನಿರೆ - ಶೈಕ್ಷಣಿಕ ನೆರವು ; ಯಕ್ಷ ಕಲಾರಾಧನೆ ; ಸನ್ಮಾನ
Posted On:
27-01-2024 06:53AM
ಪಲಿಮಾರು : ಸುವರ್ಣ ಪ್ರತಿಷ್ಠಾನ ಕರ್ನಿರೆ ಇವರಿಂದ 11ನೇ ವಾರ್ಷಿಕೋತ್ಸವದ ಅಂಗವಾಗಿ ಶೈಕ್ಷಣಿಕ ನೆರವು, ಯಕ್ಷ ಕಲಾರಾಧನೆ ಮತ್ತು ಹಿರಿಯ ಕಲಾವಿದರ ಸನ್ಮಾನ ಕಾರ್ಯಕ್ರಮ ಜರಗಿತು.
ಕರ್ನಿರೆ ಜಾರಂದಾಯ ದೈವದ ಗಡುವಾಡು ಬಳಿ ಕೊಪ್ಪಳ ತೋಟದಲ್ಲಿ ದುಬೈ ನಿವಾಸಿ- ಹವ್ಯಾಸಿ ಯಕ್ಷಗಾನ ವೇಷಧಾರಿ ಪ್ರಭಾಕರ ಡಿ. ಸುವರ್ಣ ಮತ್ತು ಕುಟುಂಬಿಕರು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.
ಸನ್ಮಾನ/ಶೈಕ್ಷಣಿಕ ನೆರವು : ಯಕ್ಷಗಾನ ವಿದ್ವಾಂಸರಾದ ಡಾ.ಎಂ. ಪ್ರಭಾಕರ ಜೋಶಿ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಅರ್ಥಧಾರಿ, ಸಂಘಟಕರಾದ ಅಶೋಕ ಭಟ್, ಜಬ್ಬಾರ್ ಸಮೋ ಸಂಪಾಜೆ, ವೇಷಧಾರಿಗಳಾದ ಸರಪಾಡಿ ಅಶೋಕ ಶೆಟ್ಟಿ, ಡಿ.ಮನೋಹರ ಕುಮಾರ್, ಶಶಿಕಾಂತ ಶೆಟ್ಟಿ ಕಾರ್ಕಳ ಹಾಗೂ ಯಕ್ಷಗಾನ, ನೃತ್ಯ ಕಲಾವಿದೆ ಸುಮಂಗಲಾ ರತ್ನಾಕರ್ ರನ್ನು ಸನ್ಮಾನಿಸಲಾಯಿತು.
ಪ್ರತಿಷ್ಠಾನದ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ ನಿಧಿಯನ್ನು ವಿತರಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ತೆಂಕುತಿಟ್ಟಿನ ವಿವಿಧ ಮೇಳಗಳ ಹೆಸರಾಂತ ಕಲಾವಿದರಿಂದ 'ಶ್ರೀಮತಿ ಪರಿಣಯ - ಸಮಗ್ರ ಭೀಷ್ಮ' ಯಕ್ಷಗಾನ ಬಯಲಾಟ ನಡೆಯಿತು.
ಈ ಸಂದರ್ಭ ಸುವರ್ಣ ಪ್ರತಿಷ್ಠಾನ ಕರ್ನಿರೆ ಅಧ್ಯಕ್ಷ ಪ್ರಭಾಕರ ಡಿ.ಸುವರ್ಣ ಮತ್ತು ಕುಟುಂಬ ವರ್ಗ, ಸಂಯೋಜಕರಾದ ಬಿ. ಜನಾರ್ದನ ಅಮ್ಮುಂಜೆ ಮತ್ತಿತರರು ಉಪಸ್ಥಿತರಿದ್ದರು.