ಕಾಪು : ಇನ್ನಂಜೆ ಯುವಕ ಮಂಡಲದ ಸದಸ್ಯರು ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭ ರಾತ್ರಿ ಹಗಲು ಕರಸೇವೆ ಮಾಡಿದ ಫಲವಾಗಿ ಇಂದು ಸುಸಜ್ಜಿತ ಸಭಾಭವನ ನಿರ್ಮಾಣ ಮಾಡುವಂತಾಗಿದೆ ಎಂದು ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.
ಅವರು ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಇನ್ನಂಜೆಯಲ್ಲಿ ನಿರ್ಮಾಣವಾದ ಸುವರ್ಣ ಸಭಾಭವನ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಕಾಪು ಶಾಸಕರಾದ ಗುರ್ಮೆ ಸುರೇಶ್
ಶೆಟ್ಟಿ ಧ್ವಜಸ್ತಂಭ ಉದ್ಘಾಟಿಸಿ ಸಂದರ್ಭೋಚಿತವಾಗಿ ಮಾತನಾಡಿದರು.
ಶ್ರೀಮತಿ ಸುಂದರಿ ಶೆಟ್ಟಿ ವೇದಿಕೆಯನ್ನು ಮುಂಬೈ ಉದ್ಯಮಿ ರತ್ನಾಕರ ಶೆಟ್ಟಿ ಸಾಧು ಮನೆ ಮಂಡೇಡಿ ಅನಾವರಣಗೊಳಿಸಿದರು.
ಮಂಗಳೂರಿನ ಉದ್ಯಮಿ ಗ್ರೆಗೋರಿ ಮಥಾಯಸ್ ಇನ್ನಂಜೆ ಕಛೇರಿ ಹಸ್ತಾಂತರ ಮಾಡಿದರು.
ಮುಂಬೈ ಉದ್ಯಮಿ ಶಶಿಧರ್ ಕೆ. ಶೆಟ್ಟಿ ಮಂಡೇಡಿ ಬಾಲವನ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನಂಜೆ ಯುವಕ ಮಂಡಲ ಇದರ ಅಧ್ಯಕ್ಷರಾದ ದಿವೇಶ್ ಶೆಟ್ಟಿ ವಹಿಸಿದ್ದರು.
ಈ ಸಂದರ್ಭ ಇನ್ನಂಜೆ ಎಸ್ ವಿ ಎಚ್ ವಿದ್ಯಾಸಂಸ್ಥೆಯ ಸಂಚಾಲಕ ವೇದಮೂರ್ತಿ ಪಾಡಿಗಾರು ಶ್ರೀನಿವಾಸ ತಂತ್ರಿ, ಎಸ್ ವಿ ಎಚ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರತ್ನ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಇನ್ನಂಜಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಉಡುಪಿ ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಇನ್ನಂಜೆ ಯುವಕ ಮಂಡಲದ ಗೌರವ ಸಲಹೆಗಾರರುಗಳಾದ ಚಂದ್ರಹಾಸ ಗುರುಸ್ವಾಮಿ, ನವೀನ್ ಅಮೀನ್ ಶಂಕರಪುರ, ಕಾರ್ಯದರ್ಶಿ ಹರೀಶ್ ಪೂಜಾರಿ, ಸಲಹಾ ಸಮಿತಿಯ ಸದಸ್ಯರಾದ ರಮೇಶ್ ಮಿತ್ತಂತಾಯ, ಶ್ರೀಶ ಭಟ್, ಯು. ನಂದನ್ ಕುಮಾರ್, ರವಿವರ್ಮ ಶೆಟ್ಟಿ, ಸುರೇಶ್ ಎನ್ ಪೂಜಾರಿ, ಗೌರವ ಸಲಹೆಗಾರರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿಮಿತ್ತ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.