17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2024 : ಶಿವಾನಂದ ಕೋಟ್ಯಾನ್ ಗೆ ವಿಶ್ವಮಾನ್ಯ ಪ್ರಶಸ್ತಿ ಪ್ರದಾನ
Posted On:
12-02-2024 06:42PM
ಸೌದಿ ಅರೇಬಿಯಾ : 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2024
ಸೌದಿ ಅರೇಬಿಯಾದ ದಮಮ್ ನಲ್ಲಿ ಫೆಬ್ರವರಿ 8 ರಂದು ಅದ್ಧೂರಿಯಾಗಿ ಸಂಪನ್ನವಾಯಿತು.
ಓಮಾನ್ ಮಸ್ಕತ್ ನಲ್ಲಿರುವ ಅನಿವಾಸಿಗ ಶಿವಾನಂದ ಕೋಟ್ಯನ್ ರವರಿಗೆ ವಿಶೇಷವಾಗಿ ಆಹ್ವಾನಿಸಿ ತಮ್ಮ ಕೊಡುಗೆ ಕಲೆ, ಸಾಹಿತ್ಯ ಮತ್ತು ಚಲನಚಿತ್ರಗಳ ಆಯೋಜನೆ, ಸಹಾಯ- ಸಹಕಾರ ಸಮಾಜ ಸೇವೆ ಹೀಗೆ ಹಲವು ಕ್ಷೇತ್ರಗಳಲ್ಲಿನ ಸೇವೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.
ವೈಭವಯುತವಾದ 17ನೇ ವಿಶ್ವ ಕನ್ನಡ ಸಂಸ್ಕೃತಿಕ ಸಮ್ಮೇಳನ ಪ್ರಥಮ ಬಾರಿಗೆ ಸೌದಿ ಅರೇಬಿಯಾದಲ್ಲಿ ಯಶಸ್ವಿಯಾಗಿ ಜರುಗಿತು. ಕನ್ನಡ ಭಾಷೆ, ನಡೆ ನುಡಿಯ ಬಗೆಗಿನ ಮನರಂಜನೆ, ಕವಿ ಗೋಷ್ಟಿ, ಯಕ್ಷಗಾನ ಕಾರ್ಯಕ್ರಮಗಳು ಜರಗಿದವು.
ಮುಖ್ಯ ಅತಿಥಿಗಳಾಗಿ ಸಭಾಪತಿ ಯು.ಟಿ. ಖಾದರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಪ್ರೊ. ಎಸ್. ಜಿ. ಸಿದ್ದರಾಮಯ್ಯ, ಅನಿವಾಸಿ ಕನ್ನಡಿಗರ ಕೋಶ ಉಪಾಧ್ಯಕ್ಷ ಡಾ. ಆರತಿ ಕೃಷ್ಣ, ಪುತ್ತೂರು ಶಾಸಕ ಅಶೋಕ್ ರೈ, ಪೌರ ಆಡಳಿತ ಮತ್ತು ಹಜ್ ಖಾತೆ ಸಚಿವ ಜನಾಬ್ ರಹೀಮ್ ಖಾನ್ ವಕೀಲ ಪದ್ಮರಾಜ್ ಆರ್, ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಮಂಜುನಾಥ ಸಾಗರ್ ಉಪಸ್ಥಿತಿಯಿದ್ದರು.
ಜನಾಬ್ ಝಕರಿಯಾ ಬಜ್ಪೆ, ಜನಾಬ್ ಶೇಖ್ ಕರ್ನಿರೆ ಮತ್ತು ಸತೀಶ್ ಕುಮಾರ್ ಬಜಲ್ ಮತ್ತು ತಂಡವು ಕಾರ್ಯಕ್ರಮ ಆಯೋಜಿಸಿತ್ತು. ಕನ್ನಡ, ತುಳು ಗಾಯನ, ಹಾಗೂ ನೃತ್ಯ, ವೈವಿಧ್ಯವೂ ಜರಗಿತು.