ಕಾಪು : ತಹಶಿಲ್ದಾರ್ ಕಚೇರಿಯಲ್ಲಿ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ
Posted On:
18-02-2024 09:29AM
ಕಾಪು : ತಾಲೂಕು ತಹಶಿಲ್ದಾರ್ ಕಚೇರಿಯಲ್ಲಿ ವಿಶ್ವಗುರು ಸಾಂಸ್ಕೃತಿಕ ನಾಯಕ ಭಾವಚಿತ್ರವನ್ನು ಕಾಪು ತಾಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು ಸರ್ಕಾರ
ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ. ಬುದ್ಧ, ಬಸವ, ಮಹಾತ್ಮಾ ಗಾಂಧಿ, ಅಂಬೇಡ್ಕರ್ ಈ ಎಲ್ಲ ಮಹನೀಯರು ಆರೋಗ್ಯಕರ, ಮನುಷ್ಯತ್ವದಿಂದ ಕೂಡಿದ ಸಮಾಜಿಕ ವ್ಯವಸ್ಥೆಯನ್ನು ಬಯಸಿದವರು. ಜಾತೀಯತೆ, ಮೌಢ್ಯ ಕಂದಾಚಾರಗಳನ್ನು ಸಮಾಜದಲ್ಲಿ ಪ್ರಚಲಿತವಾಗಿದೆ. ಅಸಮಾನತೆ ತೊಲಗಿ ಎಲ್ಲರೂ ಗೌರವದಿಂದ ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ದಿಸೆಯಲ್ಲಿ ಬಸವಣ್ಣನವರು ಶ್ರಮಿಸಿದರು.
ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು. ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ ಎಂದರು.
ಈ ಸಂದರ್ಭ ತಹಶಿಲ್ದಾರ್ ಕಚೇರಿಯ ಉಪತಹಶೀಲ್ದಾರರಾದ ದೇವಕಿ, ಅಶೋಕ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.