ಹೆಜಮಾಡಿ : ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಬ್ಯಾಂಕಿಂಗ್ ಸೊಸೈಟಿಯಾಗಿ ಹೆಗ್ಗಳಿಕೆ ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನವೀಕರಣಗೊಂಡ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಬ್ಯಾಂಕಿಂಗ್ ಕಟ್ಟಡದ ಉದ್ಘಾಟನೆಯನ್ನು ಭಾನುವಾರ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಗಮದ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ದೀಪ ಪ್ರಜ್ವಲನೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಮಂಗಳೂರು ಇದರ ಅಧ್ಯಕ್ಷರಾದ ನವೀನ್ ಚಂದ್ರ ಡಿ. ಸುವರ್ಣ ಮಾಡಿದರು. ನಾಮ ಫಲಕದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಪಡಿತರ ವ್ಯವಸ್ಥೆಯ ಗೋದಾಮನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಭದ್ರತಾ ಕೊಠಡಿಯನ್ನು ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಶ್ಮ ಎ. ಮೆಂಡನ್ ಉದ್ಘಾಟಿಸಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಬಂದರಿನ ಮೂಲಕ ಪ್ರಸಿದ್ಧಿ ಪಡೆದ ಹೆಜಮಾಡಿಯಲ್ಲಿ ಪ್ರಥಮ ಹವಾನಿಯಂತ್ರಿತ ಕಟ್ಟಡವಾಗಿ ಪಡುಬಿದ್ರಿ ಸಿ.ಎ ಸೊಸೈಟಿಯ ಹೆಜಮಾಡಿ ಶಾಖೆ ಉದ್ಘಾಟನೆಯಾಗಿದೆ. ಸಹಕಾರಿ ಸೊಸೈಟಿಗಳು ಕಲ್ಪವೃಕ್ಷದಂತೆ ಬಹಳಷ್ಟು ಕೊಡುಗೆ ನೀಡಿದೆ. ಸಾಮಾಜಿಕವಾಗಿ, ಕೃಷಿಕರ, ಊರಿನ ಅಭಿವೃದ್ಧಿ ಬಗ್ಗೆ ಪಡುಬಿದ್ರಿ ಸಿ.ಎ ಸೊಸೈಟಿ ಕೆಲಸ ಮಾಡುತ್ತಿದೆ. ಶೇ.25 ಡಿವಿಡೆಂಟ್ ನೀಡಿ, 125 ಕೋಟಿ ಲಾಭದಾಯಕವಾಗಿದೆ. ಗ್ರಾಹಕರು ನಮ್ಮ ದೇವರು ಎಂಬ ಸೇವಾ ಭಾವನೆಯಿಂದ ದುಡಿಯುವ ಸಂಸ್ಥೆಯ ಉದ್ಯೋಗಿಗಳ ಮೂಲಕ ಈ ಸಾಧನೆ ಸಾಧ್ಯವಾಗಿದೆ ಎಂದರು.
ಸನ್ಮಾನ/ಸ್ವಚ್ಛತಾ ಪರಿಕರ ವಿತರಣೆ : ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕಾಪು ದಿವಾಕರ ಶೆಟ್ಟಿ, ಶೈಕ್ಷಣಿಕ ಸಾಧಕಿ ಡಾ. ಹರ್ಷಿತ ಎನ್. ಅಂಚನ್, ಕ್ರೀಡಾ ಸಾಧಕ ಧನುಷ್ ಎಸ್. ಸಾಲ್ಯಾನ್‌ರನ್ನು ಸನ್ಮಾನಿಸಲಾಯಿತು. ಸೊಸೈಟಿ ವ್ಯಾಪ್ತಿಯ ಕರಾವಳಿಯನ್ನು ನಿರಂತರವಾಗಿ ಸ್ವಚ್ಛಗೊಳಿಸಿ ಉತ್ತಮ ಸಮಾಜ ಸೇವೆಗೈಯ್ಯುತ್ತಿರುವ ಹೆಜಮಾಡಿ ಕರಾವಳಿ ಯುವಕ ಯುವತಿ ವೃಂದ ಮತ್ತು ಪಡುಬಿದ್ರಿ ನಡಿಪಟ್ನ ಕರಾವಳಿ ಸ್ಟಾರ್ ಸಂಸ್ಥೆಗಳಿಗೆ ಸ್ವಚ್ಚತಾ ಪರಿಕರಗಳನ್ನು ವಿತರಿಸಲಾಗುವುದು.
ಈ ಸಂದರ್ಭ ಫೆ. 5 ರಿಂದ ಮಾರ್ಚ್ ಅಂತ್ಯದವರೆಗೆ ಸೊಸೈಟಿಯಲ್ಲಿ ಠೇವಣಿ ವಿನಿಯೋಗಿಸಿದ ಠೇವಣಿದಾರರಿಗೆ, ಚಿನ್ನಾಭರಣ ಸಾಲ ಪಡೆದ 10 ವಿಜೇತರನ್ನು ಗಣ್ಯರು ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಿ ಚಿನ್ನದ ನಾಣ್ಯ, ಆಕರ್ಷಕ ಬಹುಮಾನ ವಿತರಿಸಿದರು.
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು
ಈ ಸಂದರ್ಭ ನವೀನಚಂದ್ರ ಡಿ ಸುವರ್ಣ, ಬಿ ಜಯಕರ ಶೆಟ್ಟಿ ಇಂದ್ರಾಳಿ, ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಮೋಹನ್ ಸುವರ್ಣ, ಪಾಂಡುರಂಗ ಸಿ ಕರ್ಕೇರ, ಪ್ರಾಣೇಶ್ ಹೆಜಮಾಡಿ, ಸುಧಾಕರ ಕರ್ಕೇರ, ವಾಮನ ಕೋಟ್ಯಾನ್, ದಯಾನಂದ ಹೆಜಮಾಡಿ, ಸತೀಶ್ ನಾಯ್ಕ್, ಸುರೇಶ್ ಶೆಟ್ಟಿ, ಲೋಕೇಶ್ ಕೆ. ಅಮೀನ್, ರಾಜು ಹೆಜಮಾಡಿ, ಮೊಹಮ್ಮದ್ ಇಸ್ಮಾಯಿಲ್, ಎಚ್ ಶೇಷಗಿರಿ, ವಾದಿರಾಜ ಆಚಾರ್ಯ, ಹೆಚ್. ರವಿ ಕುಂದರ್ ಹೆಜಮಾಡಿ, ರಾಲ್ಫಿ ಡಿ'ಕೋಸ್ತ, ಹರೀಶ್ ದೇವಾಡಿಗ, ಜಯಂತ್ ಪುತ್ರನ್, ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಕಾರ್ಯನಿರ್ವಹಣಾಧಿಕಾರಿ ನಿಶ್ಮಿತ ಪಿ.ಎಚ್, ಶಾಖಾ ವ್ಯವಸ್ಥಾಪಕಿ ಶಕುಂತಳ, ನಿರ್ದೇಶಕರುಗಳಾದ ರಸೂಲ್ ವೈ.ಜಿ, ಗಿರೀಶ್ ಪಲಿಮಾರು, ಶಿವರಾಮ ಎನ್. ಶೆಟ್ಟಿ, ರಾಜಾರಾಮ್ ರಾವ್, ವಾಸುದೇವ ದೇವಾಡಿಗ, ಯಶವಂತ್ ಪಿ.ಬಿ, ಮಾಧವ ಆಚಾರ್ಯ, ಸ್ಟ್ಯಾನಿ ಕ್ವಾಡ್ರಸ್, ಸುಚರಿತ ಎಲ್ ಅಮೀನ್, ಕುಸುಮಾ ಎಮ್. ಕರ್ಕೇರ, ಕಾಂಚನ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಬಾಲ ಗೋಪಾಲ್ ಬಲ್ಲಾಳ್ ಕೆ. ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಹೆಜಮಾಡಿ ಪೇಟೆಯಿಂದ ಹೆಜಮಾಡಿ ಶಾಖೆಯವರೆಗೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.
ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಸತೀಶ್ಚಂದ್ರ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷ ಗುರುರಾಜ್ ಪೂಜಾರಿ ವಂದಿಸಿದರು.