ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರಧಾನ ಸಮಾರಂಭ
Posted On:
20-02-2024 09:09PM
ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ ಹಾಗೂ ಸೈoಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಪಾಡಿ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರಧಾನ ಸಮಾರಂಭ ಮಂಗಳವಾರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅವರು ಚೆಂಡೆವಾದನದ ಮೂಲಕ ಉದ್ಘಾಟಿಸಿ ಮಾತನಾಡಿ, ಜನಪದ ಕಲೆಯನ್ನು ದಾಖಲೀಕರಣ ಮಾಡಬೇಕಾದ ತುರ್ತು ಅವಶ್ಯಕತೆ ಇದೆ ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆ ಇದೆ. ನಮ್ಮಕನ್ನಡ ಜನಪದ ಪರಿಷತ್ತಿನಿಂದ ಇದಕ್ಕೆ ಪೂರಕವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಕ ಮಾತ ಚರ್ಚಿನ ಸಹಾಯಕ ಧರ್ಮಗುರು ಮೇಲ್ವಿನ್ ರೋಯ್ ಲೋಬೋ ವಹಿಸಿದ್ದರು.
ಮೂಡು ಸಗ್ರಿ ಕ್ಷೇತ್ರದ ಧರ್ಮದರ್ಶಿ ಭಾಸ್ಕರ ಗುಂಡಿಬೈಲು ಶುಭ ಹಾರೈಸಿದರು.
ವೇದಿಕೆಯಲ್ಲಿ ಸೈಂಟ್ ಮೇರಿಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ವಿಜಯ್,ಉಡುಪಿ ಜಿಲ್ಲಾ ವರ್ತಕರ ಸಂಘದ ಅಧ್ಯಕ್ಷ ಐರೋಡಿ ಸಹನಶೀಲ ಪೈ ಮುಂತಾದವರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ
ಡಾ. ಗಣನಾಥ ಎಕ್ಕಾರು,ಉಡುಪಿ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಕಲಾವಿದ ಗಂಗಾಧರ ಕಿದಿಯೂರು, ಸುರಭಿ ಮಹಿಳಾ ಚೆಂಡೆ ವಾದನ ಬಳಗದ ಸುನಂದ ಗೋಪಾಲ ಗಾಣಿಗ ಬೈoದೂರು ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವತಿಯಿಂದ ರಾಜ್ಯ ಅಧ್ಯಕ್ಷ ಡಾ.ಎಸ್ ಬಾಲಾಜಿ ಮತ್ತು ಜಿಲ್ಲಾ ಅಧ್ಯಕ್ಷ ಡಾ.ಗಣೇಶ್ ಕುಮಾರ್ ಗಂಗೊಳ್ಳಿ ಅವರನ್ನು ಗೌರವಿಸಲಾಯಿತು.
ಈ ಸಂದಭ೯ದಲ್ಲಿ ಡಾ.ಗಣೇಶ್ ಗಂಗೊಳ್ಳಿ ನೇತೃತ್ವದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಉದಯ ಕುಮಾರ್ ಹೈಕಾಡಿ ಸ್ವಾಗತಿಸಿದರು. ಚಂದ್ರ ಹಂಗಾರಕಟ್ಟೆ, ಫಾರೂಕ್ ಚಂದ್ರನಗರ ಪರಿಚಯಿಸಿದರು. ಜಿಲ್ಲಾ ಸಂಘಟನಾ ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾಯ೯ದಶಿ೯ ಪ್ರಕಾಶ ಸುವಣ೯ ಕಟಪಾಡಿ ವoದಿಸಿದರು.
ಸುರಭಿ ಮಹಿಳಾ ಚೆಂಡೆ ವಾದನ ಬಳಗದಿಂದ ಚೆಂಡೆ ವಾದನ ಪ್ರದಶ೯ನ ಮತ್ತು ಜಾನಪದ ಕಲಾವಿದರಾದ ಡಾ.ಗಣೇಶ್ ಗಂಗೊಳ್ಳಿ, ಅಶ್ವಿನಿ ಸುವರ್ಣ ಪಡುಬಿದ್ರೆ, ವಸಂತಿ ಕಡಂಬಳ ಕಾರ್ಕಳ, ರಮಣಿ ರವಿ ಬೈಂದೂರು ಅವರಿಂದ ಜಾನಪದ ಗಾಯನ ನಡೆಯಿತು. ಹಿಮ್ಮೇಳದಲ್ಲಿ ರೋಹಿತ್ ಕುಮಾರ್ ಮಲ್ಪೆ, ಸುರೇಶ್ ಲಕ್ಷ್ಮೀನಗರ ಸಹಕರಿಸಿದರು.