ಉಡುಪಿ : ಕಾಪು ಹೊಸ ಮಾರಿಗುಡಿ ಮುಂಭಾಗದ ಫ್ಲೈ ಓವರ್ ಅಂಡರ್ ಪಾಸ್ ನಲ್ಲಿ 3 ಹಲೊಜೆನ್ ಲೈಟ್ಗಳನ್ನು ಅಳವಡಿಸಿದ್ದರೂ, ಕಳೆದ 18 ತಿಂಗಳಿನಿಂದ ಬೆಳಕಿಲ್ಲದೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರಾದ ಸ್ಥಳೀಯ ನಿವಾಸಿ ಜಯರಾಮ್ ಆಚಾರ್ಯ ಅವರು ಅಧಿಕಾರಿಗಳಿಗೆ Email ಮೂಲಕ ಮನವಿ ಕಳುಹಿಸಿದ್ದರೂ ಕೂಡಾ ಯಾವುದೇ ಪ್ರತಿಕ್ರಿಯೆ ದೊರೆತಿರಲಿಲ್ಲ, ನಮ್ಮ ಕಾಪು ನ್ಯೂಸ್ ಮೂಲಕ ಈ ವರದಿಯನ್ನು ಮಾಚ್೯ 1, ಶುಕ್ರವಾರದಂದು ಬಿತ್ತರಿಸಿದ್ದು, ಮರುದಿನ ಜಯರಾಮ್ ಆಚಾರ್ಯ ಅವರು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರನ್ನು ಮುಖತಃ ಭೇಟಿ ಮಾಡಿ ಮನವಿ ನೀಡಿದ್ದರು.
ಮಾಚ್೯ 2, ಶನಿವಾರ ರಾತ್ರಿ 08:30 ರ ಅಸುಪಾಸಿಗೆ ಈ ಭಾಗದಲ್ಲಿ ಸೇಲ್ಸ್ ಮ್ಯಾನ್ ಓರ್ವರು ನಡೆದುಕೊಂಡು ಹೋಗುತ್ತಿದ್ದಾಗ ಅವರ ಕೈಯಲ್ಲಿದ್ದ ಲಕ್ಷಾಂತರ ರೂಪಾಯಿ ಇದ್ದ ಪರ್ಸನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಅಧಿಕಾರಿಗಳು ಇನ್ನಾದರೂ ಬೆಳಕಿನ ವ್ಯವಸ್ಥೆಯನ್ನು ಮಾಡುವರೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಯರಾಮ್ ಆಚಾರ್ಯ ನಮ್ಮ ಕಾಪು ನ್ಯೂಸ್ ಮೂಲಕ ಅಗ್ರಹಿಸಿದ್ದಾರೆ.