ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನ ಮುಂಭಾಗದ ಫ್ಲೈ ಓವರ್ ಅಂಡರ್ ಪಾಸ್ ನಲ್ಲಿ ಬೆಳಕು ಕಾಣದೇ ಒಂದುವರೆ ವರುಷ ಕಳೆದಿರುವ ಕಾಪು ಜನತೆ ಇದೀಗ ನಮ್ಮ ಕಾಪು ನ್ಯೂಸ್ ವರದಿ ಬಿತ್ತರಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ಬೆಳಕಿನ ವ್ಯವಸ್ಥೆಯನ್ನು ಮಾಡಿರುತ್ತಾರೆ.
ಸಾಮಾಜಿಕ ಕಾರ್ಯಕರ್ತ ಜಯರಾಮ್ ಆಚಾರ್ಯ ಈ ಬಗ್ಗೆ ಮಾಧ್ಯಮದ ಗಮನಕ್ಕೆ ತಂದಿದ್ದು, ಅಧಿಕಾರಿಗಳಿಗೆ ನಿರಂತರವಾಗಿ ಮೇಲ್ ಮೂಲಕ ಮನವಿಯನ್ನು ಸಲ್ಲಿಸುತ್ತಿದ್ದರು.
ನಮ್ಮ ಕಾಪು ವರದಿಯ ನಂತರ ಟೋಲ್ ಮ್ಯಾನೇಜರ್ ತಿಮ್ಮಯ್ಯ ಎ. ಎಸ್ ಅವರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಹಲೋಜೇನ್ ಲೈಟ್ ಅಳವಡಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಟೋಲ್ ಸಿಬ್ಬಂದಿಗಳು, ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ಸೂಕ್ತ ಸ್ಪಂದನೆ ನೀಡಿರುವುದಕ್ಕೆ ಕಾಪು ಜನತೆಯ ಪರವಾಗಿ ಜಯರಾಮ್ ಆಚಾರ್ಯ ಅವರು ಅಭಿನಂದನೆ ಮತ್ತು ಧನ್ಯವಾದಗಳನ್ನು ತಿಳಿಸಿರುತ್ತಾರೆ.