ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ - 'ಚೆಂಡು'ಗೆ ಚಾಲನೆ
Posted On:
22-03-2024 05:05PM
ಪಡುಬಿದ್ರಿ : ಇತಿಹಾಸ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾಚ್೯ 22ರಂದು ಚೆಂಡುಗೆ ಚಾಲನೆ ನೀಡಲಾಯಿತು.
ದೇವಳದ ತಂತ್ರಿವರ್ಯರ ಪ್ರಾರ್ಥನೆಯೊಂದಿಗೆ ಚೆಂಡಿನ ಸೇವಾಕರ್ತರಾದ ಶರತ್ ಪೂಜಾರಿಯವರು ಬಗ್ಗೆಡಿ ಗುತ್ತಿನಾರ್ ಮತ್ತು ನಡ್ಸಾಲು ಗುತ್ತಿನಾರುಗಳಿಗೆ ಹಸ್ತಾಂತರಿಸಿ ಅವರು ಚೆಂಡನ್ನು ದೇವಳದ ಮುಂಭಾಗದ ವಠಾರಕ್ಕೆ ಎಸೆಯುವ ಮೂಲಕ ಚಾಲನೆ ನೀಡಲಾಯಿತು.
ಪಾದೆಬೆಟ್ಟುವಿನ ಮಾಗಂದಡಿ ಯುವಕರು ಮತ್ತು ನಡ್ಸಾಲು ಗ್ರಾಮದ ಯುವಕರು ರಥೋತ್ಸವದ ಮರುದಿನ ಚೆಂಡಾಟ ಆಡುವ ಪ್ರತೀತಿ ಇತ್ತು.
ಪ್ರತಿ ವರ್ಷದಂತೆ ಈ ಬಾರಿಯೂ ಊರಿನ ಹಿರಿಯರು, ಕಿರಿಯರು ಚೆಂಡು ಆಡುವ ಮೂಲಕ ಸಂಭ್ರಮಿಸಿದರು.
ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಬೀಡು ರತ್ನಾಕರರಾಜ ಅರಸು ಕಿನ್ಯಕ್ಕ ಬಲ್ಲಾಳ್ ಮತ್ತು ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ, ಬಗ್ಗೆಡಿ ಗುತ್ತಿನಾರ್ ಶೇಖರ ಶೆಟ್ಟಿ, ನಡ್ಸಾಲು ಗುತ್ತಿನಾರ್ ಶ್ರೀನಾಥ ಹೆಗ್ಗಡೆ, ಅನಿಲ್ ಶೆಟ್ಟಿ, ದೇವಾಲಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕೋಟೆಕಾರ್, ಭಕ್ತರು ಉಪಸ್ಥಿತರಿದ್ದರು.