ಶಿರ್ವ : ಉಡುಪಿ -ಚಿಕ್ಕಮಗಳೂರು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು
Posted On:
29-03-2024 10:43PM
ಶಿರ್ವ: ಗ್ರಾಮದ ದೈವಸ್ಥಾನಕ್ಕೆ ತಡರಾತ್ರಿ ಆಗಮಿಸಿ ಸಭೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ.
ಶಿರ್ವ ಗ್ರಾಮದ ಜಾರಂದಾಯ ದೈವಸ್ಥಾನದಲ್ಲಿ
ಜಾತ್ರೆ ಇದ್ದ ಬಗ್ಗೆ ಮಾಹಿತಿ ಆಧರಿಸಿ ರಾತ್ರಿ ಗಂಟೆ 12:30 ಕ್ಕೆ ಚುನಾವಣಾಧಿಕಾರಿ ಹೋದಾಗ ಯಾವುದೇ ಕಾರ್ಯಕ್ರಮ ಇಲ್ಲದೇ ಇದ್ದು ಅಲ್ಲಿ ವಿಚಾರಿಸಿದಾಗ ಆಡಳಿತ ಮಂಡಳಿಯವರು ತಡರಾತ್ರಿಯವರೆಗೆ ಕಾರ್ಯಕ್ರಮ ನಡೆಸಿದ್ದಲ್ಲದೆ, ಈ ಧಾರ್ಮಿಕ ಸ್ಥಳದಲ್ಲಿ ಉಡುಪಿ -ಚಿಕ್ಕಮಗಳೂರು ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇವರ ಜೊತೆಗೂಡಿ ಸಭೆ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿರುವುದು ಕಂಡು ಬಂದಿದೆ.
ಈ ಬಗ್ಗೆ ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.