ಕಾಪು ಪೊಲೀಸ್ ಠಾಣಾ ಮಹಿಳಾ ಸಿಬಂದಿ ನೇಣಿಗೆ ಶರಣು
Posted On:
30-03-2024 01:46PM
ಕಾಪು : ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.
ಜ್ಯೋತಿ (28) ಮೃತ ಮಹಿಳಾ ಪೊಲೀಸ್ ಸಿಬಂದಿಯಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಶುಕ್ರವಾರ ಎಂದಿನಂತೆ ಕರ್ತವ್ಯ ನಡುವೆ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಮೃತ ಪೊಲೀಸ್ ಸಿಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬಂದಿಯಾಗಿದ್ದು, ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಗಮನಿಸಿದ್ದರು.
ಕಾಪು ಎಸ್ಸೈ ಅಬ್ದುಲ್ ಖಾದರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.