ಕಾಪು : ಪಂಜಿನ ಮೆರವಣಿಗೆಯ ಮೂಲಕ ಮತದಾನದ ಜಾಗೃತಿ
Posted On:
02-04-2024 11:10PM
ಕಾಪು : ತಾಲೂಕು ಆಡಳಿತ ಕಾಪು, ತಾಲೂಕು ಪಂಚಾಯತ್ ಕಾಪು, ಪುರಸಭೆ ಕಾಪು ಇವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆಯ ಮೂಲಕ ಮತದಾನದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜನಾರ್ದನ ದೇವಸ್ಥಾನದಿಂದ ಕಾಪು ಪೇಟೆಯ ವರೆಗೆ ಮೆರವಣಿಗೆಯಲ್ಲಿ ಸಾಗಿ ಕಾಪು ತಾಲೂಕು ತಹಶೀಲ್ದಾರ್ ಡಾ| ಪ್ರತಿಭಾ ಆರ್ ರವರು ಮತದಾನದ ಮಹತ್ವ ಮತ್ತು ಮತದಾರರ ಕರ್ತವ್ಯದ ಬಗ್ಗೆ ಮಾತನಾಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಕಾರ್ಯದರ್ಶಿಯವರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.