ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬೆಂಗಳೂರಿನ ಎಂ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇವರು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುತ್ತಾರೆ.