ಪಡುಬಿದ್ರಿಯಲ್ಲಿ 133 ನೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
Posted On:
14-04-2024 08:09PM
ಪಡುಬಿದ್ರಿ : ಈ ದೇಶದ ಸಮಸ್ತ ಮಹಿಳೆಯರಿಗೆ ಆಸ್ತಿ ಹಕ್ಕು, ಉದ್ಯೋಗ, ಹೆರಿಗೆ ಭತ್ಯೆ, ಸಮಾನ ವೇತನ ಅನೇಕ ಸಂವಿಧಾನ ಬದ್ದ ಹಕ್ಕುಗಳನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕಾರಣರಾದವರು ಡಾ. ಬಿ.ಆರ್ ಅಂಬೇಡ್ಕರ್, ಹಾಗು ಸಮಸ್ತ ದೇಶವಾಸಿಗಳಿಗೆ ದುಂಡು ಮೇಜಿನ ಪರಿಷತ್ ನಲ್ಲಿ ವಾದ ಮಾಡುವ ಮೂಲಕ ಮತದಾನದ ಹಕ್ಕನ್ನು ನೀಡಿರುತ್ತಾರೆ. ರಿಸರ್ವ್ ಬ್ಯಾಂಕ್ ಅನ್ನು ಸ್ಥಾಪಿಸುವುದರ ಮೂಲಕ ದೇಶದ ಆರ್ಥಿಕತೆಗೆ ಭಾಷ್ಯ ಬರೆದವರು ಡಾ. ಬಿ.ಆರ್ ಅಂಬೇಡ್ಕರ್ ರವರು. ದೇಶದ ಸಮಸ್ತ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವುದು ಮಾತ್ರವಲ್ಲ ಈ ದೇಶದಲ್ಲಿ ಜಾರಿಯಾಲ್ಲಿರುವ ಕಾಯ್ದೆಗಳನ್ನು ರೂಪಿಸಿ, ಸಮ ಸಮಾಜದ ಬದುಕಿಗೆ ಸಂವಿಧಾನ ಬದ್ಧವಾಗಿ ಒತ್ತು ಕೊಟ್ಟವರು ಡಾ.ಬಿ.ಆರ್ ಅಂಬೇಡ್ಕರ್. ವಿಶ್ವಶ್ರೇಷ್ಠ ಭಾರತದ ಸಂವಿಧಾನವನ್ನು ಉಳಿಸಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಹಾಗು ಅಂಬೇಡ್ಕರ್ ರವರಿಗೆ ನೀಡುವ ವಿಶೇಷ ಗೌರವವೆಂದು ಚಿಂತಕ, ಹೋರಾಟಗಾರ ಶೇಖರ್ ಹೆಜ್ಮಾಡಿ ಹೇಳಿದರು.
ಅವರು ಪಡುಬಿದ್ರಿ ಬೋರ್ಡ್ ಶಾಲೆಯಲ್ಲಿ ದ.ಸಂ.ಸ. ಅಂಬೇಡ್ಕರ್ ವಾದ ಪಡುಬಿದ್ರಿ ಗ್ರಾಮ ಶಾಖೆ ಹಾಗು ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ 133 ನೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ದ.ಸಂ.ಸ ಅಂಬೇಡ್ಕರ್ ವಾದ ಪಡುಬಿದ್ರಿ ಗ್ರಾಮ ಶಾಖಾ ಪ್ರಧಾನ ಸಂಚಾಲಕ ಕೀರ್ತಿ ಕುಮಾರ್, ಪಡುಬಿದ್ರಿ ಗ್ರಾ.ಪಂ.ಸದಸ್ಯ ರಮೀಜ್ ಹುಸೇನ್, ಕರ್ನಾಟಕ ದಲಿತ ಸಂಘಷ ಸಮಿತಿ ಜಿಲ್ಲಾ ಖಜಾಂಚಿ ಸದಾಶಿವ ಕೋಟ್ಯಾನ್, ರಾಜ್ಯ ದ.ಸಂ.ಸ. ಮಹಿಳಾ ಸಂಘಟನ ಸಂಚಾಲಕಿ ವಸಂತಿ ಶಿವಾನಂದ್,,
ದ.ಸಂ.ಸ. ಅಂಬೇಡ್ಕರ್ ವಾದ ಪಡುಬಿದ್ರಿ ಗ್ರಾಮ ಶಾಖಾ ಮಹಿಳಾ ಸಂಚಾಲಕಿ ಆಶಾ ಕರ್ಕೇರ ಉಪಸ್ಥಿತರಿದ್ದರು.
ಶಿವಾನಂದ ಕೋಟ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿಠಲ್ ಮಾಸ್ಟರ್ ವಂದಿಸಿದರು.