ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪೂಜಾರಿಯವರು ಕುಂದಾಪುರದಲ್ಲಿ ಮತ ಚಲಾಯಿಸಿದ ಬಳಿಕ ಸೆಲ್ಫಿ ಪಾಯಿಂಟಿನಲ್ಲಿ ಫೋಟೋವನ್ನು ತೆಗೆಸಿಕೊಂಡರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮನೆ ಸಮೀಪದ ಕೊರ್ಗಿ ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 97ರಲ್ಲಿ ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆಯೊಂದಿಗೆ ಆಗಮಿಸಿ ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.
ದ.ಕ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಮತದಾನ : ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ತಮ್ಮ ಪತ್ನಿ ಹಾಗೂ ಪುತ್ರಿಯೊಂದಿಗೆ ಬೆಳಗ್ಗೆಯೇ ನಗರದ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ರಥಬೀದಿಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ತಾಯಿ - ತಂದೆಯರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.