ಎಸ್ಸೆಸ್ಸೆಲ್ಸಿ ಫಲಿತಾಂಶ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ
Posted On:
09-05-2024 11:16AM
ಉಡುಪಿ : 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ.
ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ, ದ.ಕ. ಜಿಲ್ಲೆ (92.12%) ದ್ವಿತೀಯ ಸ್ಥಾನಿಯಾಗಿದ್ದು ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಇದ್ದರು.
ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ.