ಪಡುಬಿದ್ರಿ : ಮಂಗಳೂರು ಹರ್ ಕ್ಯುಲರ್ಸ್ ತಂಡಕ್ಕೆ ಇನ್ನರ್ ವೀಲ್ ಟ್ರೋಫಿ -2024
Posted On:
13-05-2024 04:40PM
ಪಡುಬಿದ್ರಿ : ಇಲ್ಲಿನ ಇನ್ನರ್ ವೀಲ್ ಕ್ಲಬ್ ವತಿಯಿಂದ ಅಂತಾರಾಷ್ಟ್ರೀಯ ಇನ್ನರ್ ವೀಲ್ ಕ್ಲಬ್ ನ ಶತಮಾನೋತ್ಸವದ ಅಂಗವಾಗಿ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ ನಡೆದ
ಇನ್ನರ್ ವೀಲ್ ಕ್ಲಬ್ ನ ಇನ್ನರ್ ವೀಲ್ ಟ್ರೋಫಿ -2024 ಪಂದ್ಯಕೂಟವನ್ನು ಇನ್ನರ್ ವೀಲ್ ಜಿಲ್ಲಾ ಕಾರ್ಯದರ್ಶಿ ರಜನಿ ಭಟ್ ಉದ್ಘಾಟಿಸಿದರು.
ಈ ಸಂದರ್ಭ ಪಡುಬಿದ್ರಿ ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ , ಹಿರಿಯ ತ್ರೋಬಾಲ್, ಬಾಡ್ಮಿಂಟನ್ ಆಟಗಾರ್ತಿ ಮಮತಾ ರವಿಕಿರಣ್, ಅಂತಾರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ ಮಮತಾ ನವೀನ್, ಕಾರ್ಯದರ್ಶಿ ಮನೋರಮಾ ಸುವರ್ಣ ಉಪಸ್ಥಿತರಿದ್ದರು.
ಸಮಾರೋಪ : ಇನ್ನರ್ ವೀಲ್ ಟ್ರೋಫಿ -2024 ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತಾಡಿದ ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಚಿ ಗುರ್ಮೆ, ನಿರಂತರ ಅಭ್ಯಾಸ ಮಾಡಿದರೆ ರಾಷ್ಟ್ರಮಟ್ಟದ ಆಟಗಾರರಾಗಿ ಮೂಡಿಬರಲು ಸಾಧ್ಯ. ಆಟಗಾರರು ಶಿಸ್ತನ್ನು ಅಳವಡಿಸಿಕೊಂಡು ಅಟದ ನಿಯಮಗಳಿಗೆ ಬದ್ದರಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಇಂದಿನ ಪಂದ್ಯಕೂಟದ ಸೋಲು ಮುಂದಿನ ಗೆಲುವಿಗೆ ಕಾರಣವಾಗಿರುತ್ತದೆ ಎಂದರು.
ಉಭಯ ಜಿಲ್ಲೆಗಳಿಂದ ಬಲಿಷ್ಠ 16 ಮಹಿಳಾ ತ್ರೋಬಾಲ್ ತಂಡಗಳು ಭಾಗವಹಿಸಿದ್ದವು.
ಫೈನಲ್ ಪಂದ್ಯದಲ್ಲಿ ಮಂಗಳೂರಿನ ತುಳುನಾಡು ಯುನೃೆಟೆಡ್ ತಂಡವನ್ನು ಸೋಲಿಸುವ ಮೂಲಕ ಮಂಗಳೂರು ಹರ್ ಕ್ಯುಲರ್ಸ್ "ಬಿ" ತಂಡ ಇನ್ನರ್ ವೀಲ್ ಟ್ರೋಫಿ 2024ರ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ತುಳುನಾಡ್ ಯುನೈಟೆಡ್, ತೃತೀಯ ಸ್ಥಾನವನ್ನು ಮಂಗಳೂರ್ ಸ್ಪೋರ್ಟ್ಸಿಂಗ್ ತಂಡ ಪಡೆದು ಕೊಂಡಿತು.
ಉತ್ತಮ ಎಸೆತಗಾರ್ತಿಯಾಗಿ ಮಂಗಳೂರು ಹರ್ ಕ್ಯುಲರ್ಸ ತಂಡದ ಶ್ರೇಯಾ, ಉತ್ತಮ ಹಿಡಿತಗಾರ್ತಿ ತುಳುನಾಡ್ ಯುನೈಟೆಡ್ ತಂಡದ ನಮೃತಾ, ಮತ್ತು ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಮಂಗಳೂರು ಹರ್ ಕ್ಯುಲರ್ಸ್ ತಂಡದ ವೃೆಷ್ಣವಿ ಪಡೆದು ಕೊಂಡರು.
ಇನ್ನರ್ ವೀಲ್ ಅಧ್ಯಕ್ಷೆ ನಮೃತಾ ಮಹೇಶ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಪಡುಬಿದ್ರಿ ವ್ಯವಸಾಯ ಸಹಕಾರಿ ಸೊಸೈಟಿ ಅಧ್ಯಕ್ಷ ವೃೆ.ಸುಧೀರ್ ಕುಮಾರ್, ಮಾಜಿ ಜಿ.ಪಂ ಸದಸ್ಯ ಶಶಿಕಾಂತ್ ಪಡುಬಿದ್ರಿ, ಪಡುಬಿದ್ರಿ ಗ್ರಾ.ಪಂ ಅಧ್ಯಕ್ಷೆ ಶಶಿಕಲಾ ಪೂಜಾರಿ, ಜೆಸಿಐ ಇಂಡಿಯಾ ನಿರ್ದೇಶಕ ವೃೆ.ಸುಕುಮಾರ್ ಉಪಸ್ಥಿತರಿದ್ದರು.
ನಮೃತಾ ಮಹೇಶ್ ಸ್ವಾಗತಿಸಿ, ಕೀರ್ತೀನ್ ಸಾಲ್ಯಾನ್ ಹಾಗು ಶುಭ ದಿನೇಶ್ ನಿರೂಪಿಸಿದರು.
ಕಾರ್ಯದರ್ಶಿ ಮನೋರಮಾ ಸುವರ್ಣ ವಂದಿಸಿದರು.