ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ : ಟೋಲ್ ವಿನಾಯಿತಿ ರದ್ದು - ಮೇ 24ರಂದು ಮನವಿ ಸಲ್ಲಿಸಲು ಸಮಿತಿ ನಿರ್ಧಾರ

Posted On: 21-05-2024 11:40AM

ಹೆಜಮಾಡಿ : ಇಲ್ಲಿಯ ಟೋಲ್ ಪ್ಲಾಝಾದಲ್ಲಿ ಈ ಹಿಂದೆ ಹೆಜಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿತ್ತು. ಕಳೆದ ವಾರದಿಂದ ವಿನಾಯಿತಿ ರದ್ದುಗೊಳಿಸಿ ಫಾಸ್ಟ್‌ಟ್ಯಾಗ್‌ನಲ್ಲಿ ಟೋಲ್ ಸುಂಕ ಕಡಿತಗೊಳಿಸಲಾಗಿತ್ತು. ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಸ್ಥಳೀಯರು ಹೋರಾಟಕ್ಕೆ ಸಿದ್ಧತೆ ನಡೆಸಿದ್ದು ಪೂರ್ವಭಾವಿಯಾಗಿ ಶಾಂತಿಯುತವಾಗಿ ಮೇ 24ರಂದು ಮನವಿ ಸಲ್ಲಿಸಲು ಹೆಜಮಾಡಿ ಟೋಲ್ ವಿರೋಧಿ ಹೋರಾಟ ಸಮಿತಿ ತೀರ್ಮಾನಿಸಿದೆ. ಹೆಜಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಹೆಜಮಾಡಿ ಟೋಲ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಅದರಂತೆ ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಾಹನಗಳಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಲಾಯಿತು. ಹೆಜಮಾಡಿ ಒಳ ರಸ್ತೆಗೂ ಹೆದ್ದಾರಿ ಇಲಾಖೆ ಟೋಲ್ ಕೇಂದ್ರ ಸ್ಥಾಪಿಸಿರುವುದಕ್ಕೆ ಸಭೆಯಲ್ಲಿ ವಿರೋಧ ವ್ಯಕ್ತವಾಯಿತು.

ಹೋರಾಟ ಸಮಿತಿಯ ಶೇಖರ್ ಹೆಜಮಾಡಿ, ಶೇಖಬ್ಬ ಕೋಟೆ, ನವೀನ್‌ಚಂದ್ರ ಜೆ. ಶೆಟ್ಟಿ, ವೈ. ಸುಕುಮಾರ್, ಅಬ್ದುಲ್ ಅಝೀಝ್ ಹೆಜಮಾಡಿ, ರೋಲ್ಫಿ ಡಿ ಕೋಸ್ತ, ಅಬ್ಬಾಸ್ ಹಾಜಿ, ವಿಶ್ವಾಸ್ ವಿ.ಅಮೀನ್, ಗಣೇಶ್ ಆಚಾರ್ಯ ಉಚ್ಚಿಲ, ಉಮಾನಾಥ್ ಕೋಟ್ಯಾನ್, ಅಬ್ದುಲ್ ರಹ್ಮಾನ್ ಕಣ್ಣಂಗಾರ್, ಅಬ್ಬಾಸ್ ಹಾಜಿ, ಸಂತೋಷ್ ಪಡುಬಿದ್ರಿ, ನಿರ್ಮಲಾ, ತೇಜ್‌ಪಾಲ್ ಸುವರ್ಣ, ರಘುವೀರ್ ಸುವರ್ಣ, ಸುಧೀರ್ ಕರ್ಕೇರ, ಸನಾ ಇಬ್ರಾಹಿಂ, ಸುಭಾಸ್ ಸಾಲ್ಯಾನ್, ಅರುಣ್ ಶೆಟ್ಟಿ, ಕೇಶವ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.