ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ : ನವೀಕರಣ ಯೋಜನೆಗಳ ಹಸ್ತಾಂತರ
Posted On:
02-06-2024 11:14AM
ಕಾಪು : ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ಇವರ ಸಹಯೋಗದೊಂದಿಗೆ ಕರಂದಾಡಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಸುಮಾರು 4.50 ಲಕ್ಷ ರೂ. ವೆಚ್ಚದ ನವೀಕರಣ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿ, ಹಸ್ತಾಂತರಿಸಲಾಯಿತು.
ಕರಂದಾಡಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ರವಿರಾಜ್ ಶೆಟ್ಟಿ ಪಂಜಿತ್ತೂರುಗುತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಹೆಗಡೆ, ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್, ಬಿಗ್ ಬಾಸ್ ವಿನ್ನರ್ ಮತ್ತು ಚಲನಚಿತ್ರ ನಟ ರೂಪೇಶ್ ಶೆಟ್ಟಿ ಶುಭಾಂಶಸನೆಗೈದರು.
ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ತಂಡದ ಸದಸ್ಯ ಗುರುಪ್ರಸಾದ್ ಶೆಟ್ಟಿ ಬೈಲೂರು ತಮ್ಮ ತಂಡವು ಕಳೆದ ಏಳು ವರ್ಷಗಳಲ್ಲಿ ನಡೆಸಿದ ಕಾರ್ಯಕ್ರಮಗಳು, ಸಾರ್ವಜನಿಕ ಸಹಕಾರದ ಕುರಿತಾಗಿ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಲಯನ್ಸ್ ರೀಜನಲ್ ಚಯರ್‌ಮೆನ್ ವರುಣ್ ಶೆಟ್ಟಿ, ಅಧ್ಯಕ್ಷ ಉದಯ್ ಶೆಟ್ಟಿ, ಕಾರ್ಯದರ್ಶಿ ಲುತ್ಪುಲ್ಲಾ ಸಾಹೇಬ್ ನೇತೃತ್ವದಲ್ಲಿ ಕಾಪು ಲಯನ್ಸ್ ಕ್ಲಬ್ ವತಿಯಿಂದ ಶಾಲೆಗೆ ಬೆಂಚ್ ಮತ್ತು ಡೆಸ್ಕ್‌ಗಳಿಗಾಗಿ ೫೦ ಸಾವಿರ ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಪದ್ಮನಾಭ ಶ್ಯಾನುಭಾಗ್, ಮಜೂರು ಗ್ರಾ.ಪಂ. ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಪುಸ್ತಕದ ದಾನಿ ಮಿಥುನ್ ರೈ, ಶಾಲಾ ಹಳೆ ವಿದ್ಯಾರ್ಥಿ ರಾಮದಾಸ್ ತಂತ್ರಿ, ಕಲ್ಪವೃಕ್ಷ ಕನ್ನಡ ಶಾಲೆ ತಂಡದ ಅಧ್ಯಕ್ಷ ಶ್ರೀಧರ ಶೆಟ್ಟಿಗಾರ್ ಕರಂದಾಡಿ, ಆಡಳಿತ ಸಮಿತಿ ಸದಸ್ಯರಾದ ಶಶಿಶೇಖರ ಭಟ್, ನಾಗಭೂಷಣ್ ರಾವ್, ಮುಖ್ಯೋಪಾಧ್ಯಾಯ ಆರ್.ಎಸ್. ಕಲ್ಲೂರ, ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ, ರಂಗ ನಟರಾದ ಪ್ರಸನ್ನ ಶೆಟ್ಟಿ ಬೈಲೂರು, ಶರತ್ ಉಚ್ಚಿಲ, ಸಂದೀಪ್ ಶೆಟ್ಟಿ, ಮರ್ವಿನ್ ಶಿರ್ವ ಉಪಸ್ಥಿತರಿದ್ದರು.
ಕರಂದಾಡಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ ಪ್ರಸ್ತಾವನೆಗೈದರು. ಶಿಕ್ಷಕಿಯರಾದ ಹರಿಣಾಕ್ಷಿ ಸ್ವಾಗತಿಸಿದರು. ಸತ್ಯವತಿ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.ಅನಿತಾ ಹೆಗ್ಡೆ ವಂದಿಸಿದರು.