ಅದಮಾರು ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು : ವಿಶ್ವ ಪರಿಸರ ದಿನಾಚರಣೆ
Posted On:
05-06-2024 06:45PM
ಅದಮಾರು : ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಹಾಗೂ ಪ್ರಜ್ಞಾ ಇಕೋ ಕ್ಲಬ್ಬಿನ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಹಾಗೂ ಔಷಧೀಯ ಸಸಿಗಳ ಪ್ರಾಧಾನ್ಯತೆಯ ಕುರಿತು ಉಪನ್ಯಾಸ ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯರಾದ ಡಾ. ಪಯಸ್ವಿನಿ ಅವರು ಮಾತನಾಡಿ, ನಮ್ಮ ಪರಿಸರ ಸ್ವಚ್ಛವಾಗಿ ಇರಿಸುವುದರ ಜೊತೆಗೆ ಔಷಧೀಯ ಸಸ್ಯಗಳ ಪರಿಚಯವನ್ನು ಮಾಡಿಕೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಗಿಡಗಳಲ್ಲಿ ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಗಿಡಗಳೇ ಇರುತ್ತವೆ. ವಿದ್ಯಾರ್ಥಿಗಳು ಇದನ್ನು ಗುರುತಿಸಬೇಕಾಗಿದೆ ಎಂದು ಸ್ವತಹ ಗಿಡಗಳನ್ನು ಪ್ರದರ್ಶಿಸುವ ಮೂಲಕ ಮಕ್ಕಳಿಗೆ ಪರಿಚಯಿಸಿದರು.
ಸಂಸ್ಥೆಯ ಪ್ರಾಂಶುಪಾಲ ಸಂಜೀವ್ ನಾಯಕ್ ಮಾತನಾಡಿ, ಮಕ್ಕಳು ಪರಿಸರದ ಕಾಳಜಿಯನ್ನು ಹೊಂದಬೇಕು. ಅನಗತ್ಯ ಪರಿಸರ ಮಾಲಿನ್ಯ ಮಾಡಬಾರದು ಎಂದರು.
ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥರವರು ಮಕ್ಕಳು ತಮ್ಮ ಮಟ್ಟದಲ್ಲಿ ಪರಿಸರದ ವಿಚಾರಗಳನ್ನು ತಿಳಿದುಕೊಳ್ಳಬೇಕು, ಕೇವಲ ಪುಸ್ತಕ ಮಾತ್ರದಿಂದ ಜ್ಞಾನ ಸಿಗುವುದಿಲ್ಲ ಪರಿಸರದಿಂದಲೂ ನಾವು ಪಡೆದುಕೊಳ್ಳಬೇಕು ಎಂದರು.
ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಕಾಂತ ರಾವ್ ಮಾತನಾಡಿ, ಪ್ಲಾಸ್ಟಿಕ್ ವಸ್ತುಗಳನ್ನು ಮರುಬಳಕೆ ಮಾಡಬೇಕೆಂದರು.
ಪೂರ್ಣಪ್ರಜ್ಞಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರತಿನಿಧಿ ಪ್ರೊಫೆಸರ್ ನಿತ್ಯಾನಂದರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪರಿಸರ ಸಂಬಂಧಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಪೂರ್ಣಪ್ರಜ್ಞಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪ ಮುಖ್ಯೋಪಾಧ್ಯಾಯನಿ ನಿಶ್ಮಿತಾ ಶೆಟ್ಟಿ ಸ್ವಾಗತಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿ ಶಮೃತ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ನವ್ಯ ವಂದಿಸಿದರು.