ಕಾಪು : ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ
Posted On:
01-07-2024 06:21PM
ಕಾಪು : ಉಡುಪಿ - ಮಂಗಳೂರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್ ಅವರು ಜೂನ್ 30ರ ಭಾನುವಾರ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.
ನಂತರ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದ ಅವರು ಇಳಕಲ್ಲಿನಿಂದ ನಿರ್ಮಾಣವಾಗುತ್ತಿರುವ ದಕ್ಷಿಣ ಭಾರತದ ಮೊಟ್ಟಮೊದಲ ಬೃಹತ್ ದೇಗುಲ ಇದಾಗಿದೆ, ಕರ್ನಾಟಕ ರಾಜ್ಯದಲ್ಲೆ ಅತ್ಯದ್ಭುತವಾದಂತಹ ವಾಸ್ತುಶಿಲ್ಪ ಶೈಲಿಯನ್ನೊಳಗೊಂಡು ದೇವಸ್ಥಾನದ ನಿರ್ಮಾಣ ಮಾಡುತ್ತಿದ್ದೀರಿ.
ಇನ್ನೂ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುವ ಅಭಿವೃದ್ಧಿ ಸಮಿತಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ದೇವಳದ ಮಾಜಿ ಅಧ್ಯಕ್ಷ,ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಸಂಚಾಲಕ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ ಆಚಾರ್ಯ, ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರಿ, ಕಾತ್ಯಾಯಿನಿ ತಂಡದ ಸಂಚಾಲಕಿ ವನಿತಾ ಶೆಟ್ಟಿ, ಕಾಪು ಪೊಲೀಸ್ ಉಪನಿರೀಕ್ಷಕರಾದ ಪುರುಷೋತ್ತಮ್ ಮತ್ತು ಕಾಪು ಪೊಲೀಸ್ ವೃತ್ತ ಕಚೇರಿ ಹೆಡ್ ಕಾನ್ಸ್ಟೇಬಲ್ ಪ್ರವೀಣ್ ಉಪಸ್ಥಿತರಿದ್ದರು.