ಪಡುಬಿದ್ರಿ : ನಂದಿಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಂದಿಕೂರು ವಿಶೇಷ ಆರ್ಥಿಕ ವಲಯ ಬಳಿ ಸ್ಥಾಪನೆಯಾಗಿರುವ ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಹೊರಸೂಸುವ ದುರ್ವಾಸನೆಯಿಂದ ಪರಿಸರ ಮಾಲಿನ್ಯ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರು
ತ್ತಿರುವ ಹಿನ್ನೆಲೆಯಲ್ಲಿ ಜುಲೈ 30ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.
ಪ್ರತಿಭಟನೆಗೂ ಮೊದಲು ಪಲಿಮಾರು ಗ್ರಾಮ ಪಂಚಾಯಿತಿಗೆ ವಿಶೇಷ ಗ್ರಾಮಸಭೆ ಕರೆದು ಕಂಪೆನಿ ವಿರುದ್ಧ ನಿರ್ಣಯ ಕೈಗೊಳ್ಳುವ ಬಗ್ಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.
ಅದರೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತಿಯಾದ ಪಲಿಮಾರು, ಪಡುಬಿದ್ರಿ, ಎಲ್ಲೂರು, ಇನ್ನಾ, ಹೆಜಮಾಡಿ ಗ್ರಾಮ ಪಂಚಾಯಿತಿಯಲ್ಲೂ ವಿಶೇಷ ಗ್ರಾಮಸಭೆ ಕರೆದು ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ಕಂಪೆನಿ ಎದುರು ಪ್ರತಿಭಟನೆ ನಡೆಸಲು ನಿರ್ಣಯಿಸಲಾಯಿತು.
ಕಾನೂನು ಹೋರಾಟದ ಬಗ್ಗೆ ಊರಿನ ಹಿರಿಯರು, ಅನುಭವಿಗಳು, ವಕೀಲರನ್ನು ಒಳಗೊಂಡಂತೆ ಸಮಿತಿ ರಚಿಸುವುದು ಮತ್ತು ಸರಕಾರದ ಮತ್ತು ಇಲಾಖಾ ಅಧಿಕಾರಿಗಳ ವಿರುದ್ಧ ಒತ್ತಡ ಹೇರುವ ಬಗ್ಗೆಯೂ ತೀರ್ಮಾನಿಸಲಾಯಿತು.
ಈ ಸಂದರ್ಭ ದಿನೇಶ್ ಪಲಿಮಾರ್, ನಂದಿಕೂರು ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧ್ವರಾಯ ಭಟ್, ಪ್ರೇಮಾನಂದ ಕಲ್ಮಾಡಿ, ನವೀನ್ ಚಂದ್ರಶೆಟ್ಟಿ, ನವೀನ್ ಚಂದ್ರ ಸುವರ್ಣ, ಗಾಯತ್ರಿ ಪ್ರಭು, ಸಂದೀಪ್ ಪಲಿಮಾರ್, ಲಕ್ಷ್ಮಣ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸುಧೀರ್ ಕರ್ಕೇರ, ನಾಗೇಶ್ ರಾವ್, ಜಿತೇಂದ್ರ ಶೆಟ್ಟಿ, ಮಧುಕರ ಸುವರ್ಣ, ಶಶಿಕಾಂತ್ ಪಡುಬಿದ್ರಿ, ಶ್ರೀನಿವಾಸ ಶರ್ಮ, ರವೀಂದ್ರ ಪ್ರಭು, ಸತೀಶ್ ಗುಡ್ಡೆಚ್ಚಿ, ಚಂದ್ರಹಾಸ್ ಶೆಟ್ಟಿ, ಅಮರನಾಥ್ ಶೆಟ್ಟಿ, ದೀಪಕ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.