ಇನ್ನಂಜೆ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ಗ್ರಾಮದ ಬೀಡುವಿನ ಗದ್ದೆಯ ಕೃತಕ ನೆರೆಯ ತೊಂದರೆಗೆ ತಾತ್ಕಾಲಿಕ ಮುಕ್ತಿ ಸಿಕ್ಕಿದೆ.
ಉಡುಪಿ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಖಾಸಗಿ ಜಮೀನಿನಲ್ಲಿ ಹಾಕಿದ ತಡೆಗೋಡೆಯನ್ನು ತಾತ್ಕಾಲಿಕವಾಗಿ ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಆರ್ ಇವರು ಸ್ಥಳಕ್ಕೆ ಬಂದು ತೆರವುಗೊಳಿಸಿದರು.
ಮುಂದಿನ ದಿನದಲ್ಲಿ ಖಾಸಗಿ ಜಮೀನಿನವರ ಜೊತೆಗೆ ಇನ್ನಂಜೆ ಗ್ರಾಮ ಪಂಚಾಯತ್ ನಲ್ಲಿ ನ್ಯಾಯಂಗ ಸಮಿತಿ ಸಭೆಯನ್ನು ತಹಸೀಲ್ದಾರ್ ಮತ್ತು ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೊತೆಗೆ ಸಭೆ ನಡೆಸಿ ಇದಕ್ಕೆ ಶಾಶ್ವತ ಪರಿಹಾರ ಮಾಡಲಾಗುವುದು ಎಂದು ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಇನ್ನಂಜೆ
ತಿಳಿಸಿದರು.
ಈ ಸಂದರ್ಭ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿ ಸಿಲ್ವಾ, ಕಾಪು ಠಾಣಾಧಿಕಾರಿ ಖಾದರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಕಾರ್ಯದರ್ಶಿ ಚಂದ್ರಶೇಖರ್, ಕಂದಾಯಾಧಿಕಾರಿ ಶಬೀರ್, ಗ್ರಾಮ ಲೆಕ್ಕಿಗ ಅವಿನಾಶ್, ಇನ್ನಂಜೆ ಪಂಚಾಯತ್ ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಸದಸ್ಯರುಗಳಾದ ಸೋನು ಪಾಂಗಾಳ, ರಾಜೇಶ್ ಆಚಾರ್ಯ, ದಿವೇಶ್ ಶೆಟ್ಟಿ, ಸುರೇಶ್ ಶೆಟ್ಟಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಮಾಜಿ ಸದಸ್ಯರಾದ ನಾಗೇಶ್ ಭಂಡಾರಿ, ಮಹೇಂದ್ರ ಶೆಟ್ಟಿ ಪಾಂಗಾಳ ಉಪಸ್ಥಿತರಿದ್ದರು.
ತಡೆಗೋಡೆ ತೆರವಿಗೆ ದಿನಕರ್ ಪಾಂಗಾಳ, ಲೋಕೇಶ್ ಸಹಕರಿಸಿದರು.