ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಸಾಗರ್ ವಿದ್ಯಾ ಮಂದಿರ ಶಾಲೆಯ ಬೆಳ್ಳಿಹಬ್ಬ ಸ್ಮಾರಕ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

Posted On: 15-07-2024 06:19AM

ಪಡುಬಿದ್ರಿ : ವಿದ್ಯಾ ದಾನದ ಮಹತ್ವಾಕಾಂಕ್ಷೆಯ ಮೂಲಕ ಮೊಗವೀರ ಸಮಾಜದ ಹಿರಿಯರು ಹುಟ್ಟು ಹಾಕಿದ ಶಾಲೆಯು ಇಂದು ಸಾಗರ್ ವಿದ್ಯಾಮಂದಿರ ಶಾಲೆಯಾಗಿ ಸಮಾಜದ ಮೊತ್ತಮೊದಲ ಆಂಗ್ಲ ಮಾಧ್ಯಮ ಶಾಲೆಯಾಗಿ ರೂಪು ಪಡೆದು ಬೆಳೆಯುತ್ತಿದೆ. ಈ ಶಾಲೆಯನ್ನು ಮತ್ತಷ್ಟು ಉನ್ನತಿಗೆ ಒಯ್ಯುವುದು ನಮ್ಮೆಲ್ಲರ ಬಯಕೆಯಾಗಿದೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕರೂ ಆಗಿರುವ ನಾಡೋಜಾ ಡಾ| ಜಿ. ಶಂಕರ್ ಹೇಳಿದರು. ಅವರು ಭಾನುವಾರ ಪಡುಬಿದ್ರಿಯ ಸಾಗರ್ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲಾ ಬೆಳಿಹಬ್ಬ ಸ್ಮಾರಕ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪಡುಬಿದ್ರಿ ಬೀಡು ರತ್ನಾಕರ ರಾಜ ಅರಸು ಕಿನ್ಯಕ್ಕ ಬಲ್ಲಾಳ್ ಮಾತನಾಡಿದರು. ಮೂರನೇ ಬಾರಿಗೆ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಯ ಸಿ. ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.

ಉಚ್ಚಿಲದ ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಗುತ್ತಿಗೆದಾರ ಪವನ್ ಆನಂದ್ ಎರ್ಮಾಳು, ಅರುಣಾ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಅನಂತೇಶ್ ವಿ.  ಪ್ರಭು, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ವೈ. ಸುಧೀರ್‌  ಕುಮಾರ್, ಶಾಂತಾ ಎಲೆಕ್ಟ್ರಿಕಲ್ಸ್‌ ಆಡಳಿತ ನಿರ್ದೇಶಕ ಶ್ರೀಪತಿ ಭಟ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಅರುಣ್ ಶೆಟ್ಟಿ, ಬೆಳ್ಳಿಹಬ್ಬ ಕಟ್ಟಡ ಸಮಿತಿಯ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ, ಗ್ರಾಮಸಭೆಯ ಅಧ್ಯಕ್ಷರಾದ ಅಶೋಕ ಸಾಲ್ಯಾನ್, ಗಂಗಾಧರ ಕರ್ಕೇರ, ಪವಿತ್ರಾ ಗಿರೀಶ್, ಮಲ್ಲಿಕಾ ದಿನಕರ್, ನಾರಾಯಣ ಕರ್ಕೇರ,  ಹರಿಪ್ರಸಾದ್ ಎಚ್. ಮತ್ತಿತರರು ವೇದಿಕೆಯಲ್ಲಿದ್ದರು.

ಕಾಡಿಪಟ್ಣ ನಡಿಪಟ್ಣ ವಿದ್ಯಾಪ್ರಚಾರಕ ಸಂಘದ ಅಧ್ಯಕ್ಷ, ಶಾಲಾ ಸಂಚಾಲಕ ಸುಕುಮಾರ್ ಶ್ರೀಯಾನ್ ಸ್ವಾಗತಿಸಿದರು. ವಿನುತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮ್ಶಶ್ರೀ ರಾವ್ ವಂದಿಸಿದರು. ವೇ.ಮೂ.ರಾಮಕೃಷ್ಣ ಆಚಾರ್ಯ, ನಂದಕುಮಾರ್ ಆಚಾರ್ಯ ಅವರು ಶಿಲಾನ್ಯಾಸ ಕಾರ್ಯಕ್ರಮದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.